ಸೋಮವಾರ, ಆಗಸ್ಟ್ 15, 2022
25 °C

ಎಸ್ಎಸ್ಎಲ್‌ಸಿ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌ರಿಂದ ಸಿದ್ಧತೆ‌ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ‌ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ‌ ಮಾಡಿಕೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿದರು.

ಸೋಮವಾರ ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಚಿವರು ಖುದ್ದು ಪರಿಶೀಲನೆಗೆ ಬಂದಿದ್ದರು. ಪ್ರತಿ‌ ಕೇಂದ್ರದಲ್ಲೂ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಮಾಹಿತಿ ಪಡೆದ ಸುರೇಶ್ ಕುಮಾರ್, ಕೋವಿಡ್ ನಿಯಮ‌ ಪಾಲನೆ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು. 

ರಾಮನಗರ ಜಿ.ಪಂ. ಸಿಇಒ ಇಕ್ರಂ, ಡಿಡಿಪಿಐ ಪ್ರಸನ್ನಕುಮಾರ್ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಜೊತೆಗಿದ್ದರು.


ವಿವಿಧ ಶಾಲೆಗಳಿಗೆ ಭೇಟಿ‌ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ‌ ಮಾಡಿಕೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವ ಎಸ್. ಸುರೇಶ್ ಕುಮಾರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು