ರಾಮನಗರ: ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಬೆಳಿಗ್ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಆರಂಭಗೊಂಡಿತು.
ಬೆಳಿಗ್ಗೆ 9ರಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಇಟ್ಟರು. ತಮ್ಮ ನೋಂದಣಿ ಸಂಖ್ಯೆಗಳು ಇರುವ ಕೊಠಡಿ ಹುಡುಕುತ್ತ, ಕಡೆಯ ಕ್ಷಣಗಳಲ್ಲಿ ಓದಿನ ಕಸರತ್ತು ನಡೆಸುತ್ತಿದ್ದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇದ್ದು, ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಜಿಲ್ಲೆಯಲ್ಲಿ ಈ ವರ್ಷ 6974 ವಿದ್ಯಾರ್ಥಿಗಳು ಹಾಗೂ 6478 ವಿದ್ಯಾರ್ಥಿನಿಯರು ಸೇರಿ ಒಟ್ಟು 13,452 ಮಂದಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.