ಶುಕ್ರವಾರ, ನವೆಂಬರ್ 27, 2020
18 °C

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಾದ್ಯಂತ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭಗೊಂಡಿತು.

ಮೊದಲ ದಿನದಂದು ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಗಣಿತ ಪರೀಕ್ಷೆ ನಡೆಯಿತು. ಒಟ್ಟು 909 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು ಇದರಲ್ಲಿ 822 ಮಂದಿ ಹಾಜರಾಗಿದ್ದು, 87 ಮಂದಿ ಗೈರಾದರು. 273 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಜುಲೈ ವೇಳೆ ಕೋವಿಡ್ ಹಿನ್ನಲೆಯಲ್ಲಿ ಅನಾರೋಗ್ಯ ನಿಮಿತ್ತ ಪರೀಕ್ಷೆಗೆ ಗೈರು ಹಾಜರಾಗಿ ಸೆಪ್ಟೆಂಬರ್‌ನಲ್ಲಿ ಪೂರಕ ಪರೀಕ್ಷೆಗೆ ಪ್ರಥಮ ಯತ್ನ ಎಂದು ಪರಿಗಣಿಸಿ ಪರೀಕ್ಷೆಗೆ 24 ಮಂದಿ ಹಾಜರಾಗಿದ್ದಾರೆ.

ಜಿಲ್ಲೆಯಲ್ಲಿ ಪೂರಕ ಪರೀಕ್ಷೆಗಾಗಿ ಈ ಬಾರಿ ಒಟ್ಟಾರೆ 1877 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ 1203 ಬಾಲಕರು ಹಾಗೂ ಹಾಗೂ 674 ಬಾಲಕಿಯರು ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಯ್ಯ, ರಾಮನಗರ ಬಿಇಒ ಮರೀಗೌಡ ಮತ್ತಿತರರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.