ಸೋಮವಾರ, ಫೆಬ್ರವರಿ 24, 2020
19 °C

ವೀರಾಪುರ–ಪಾಲನಹಳ್ಳಿ ನಡುವಿನ ಬೆಟ್ಟದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಿಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುದೂರು (ಮಾಗಡಿ): ವೀರಾಪುರದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿ ನಿಸರ್ಗ ಸಂಪತ್ತನ್ನು ಉಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪಾಲನ ಹಳ್ಳಿ ಮತ್ತು ವೀರಾಪುರದ ನಡುವೆ ಇರುವ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಬೃಹತ್‌ ಬಂಡೆಯ ಮೇಲೆ ಇರುವ ಪ್ರಾಗೈತಿಹಾಸಿಕ ಕಲ್ಗೋರಿಗಳು ನಾಶವಾಗಿವೆ. ಅರಣ್ಯ ಪ್ರದೇಶ ನೆಲಮಂಗಲ ವಲಯಕ್ಕೆ ಸೇರಿದೆ, ನೈಸರ್ಗಿಕ ಸಂಪತ್ತನ್ನು ರಕ್ಷಿಸಬೇಕಾದ ಅರಣ್ಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯವರ ಜತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ವಿದ್ಯುತ್‌ ಬಳಸಿ, ಬೃಹತ್‌ ಬಂಡೆಗಳನ್ನು ಕತ್ತರಿಸಿ ಕಲ್ಲುಗಳನ್ನು ಹಗಲು ರಾತ್ರಿ ಎನ್ನದೆ ಸಾಗಿಸಲಾಗುತ್ತಿದೆ. ನಿಸರ್ಗ ಸಂಪತ್ತನ್ನು ಉಳಿಸಬೇಕಿದೆ ಎಂದು ಸುತ್ತಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)