ಶಿವಮೊಗ್ಗ: ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಯೋಜನೆಗೆ ನೀಡಿರುವ ಸಂಪುಟದ ಅನುಮೋದನೆಯನ್ನು ರಾಜ್ಯ ಸರ್ಕಾರ ತಕ್ಷಣ ವಾಪಸ್ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಡದಿ ಟೌನ್ಶಿಪ್ ಯೋಜನೆ ರೈತವಿರೋಧಿ ಆಗಿದೆ. ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿಯಾಗಿದೆ. ಸುಮಾರು 9,640 ಎಕರೆ ಭೂಸ್ವಾಧೀನ ಪ್ರಕ್ರಿಯೆ ನಡೆದಿದೆ. ಈಗಾಗಲೇ ಅದಕ್ಕೆ ಸಂಪುಟ ಅನುಮೋದನೆ ಕೂಡ ನೀಡಿದೆ. ಅದನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

‘ಬಿಡದಿ ಹೋಬಳಿ, ಬೈರಹೊಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 25 ಗ್ರಾಮಗಳ ಕೃಷಿಭೂಮಿ ಇದು. ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ತೋಟಗಾರಿಕೆ ಬೆಳೆ ಕೂಡ ಇಲ್ಲಿದೆ. ಇದು ಸಮೃದ್ಧ ಹಸಿರಿನ ಪ್ರದೇಶ. ಇಂತಹ ಜಾಗದಲ್ಲಿ ಟೌನ್ಶಿಪ್ ಮಾಡುವುದು ಸರಿಯಲ್ಲ. ಇದು ರೈತರ ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆ ಹಾಗೂ ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ ಮತ್ತು ರಿಯಲ್ ಎಸ್ಟೇಟ್ ದಂಧೆಗೆ ದಾರಿ ಯಾಗುತ್ತದೆ. ಅದನ್ನು ಪರಿಸರವಾದಿಗಳು, ಸಾಹಿತಿಗಳು ಮತ್ತು ರೈತ ಸಂಘದ ಸಂಯುಕ್ತ ಹೋರಾಟ ಒಕ್ಕೂಟ ಕೂಡ ಖಂಡಿಸುತ್ತದೆ. ರೈತರು ಕೂಡ ತಿಂಗಳುಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದಾರೆ’ ಎಂದರು.

ಮೈಸೂರು ನಗರದಿಂದ ದೂರ ಇರುವ ವರುಣಾ ಹೋಬಳಿಯ ಗುಡಮಾದನಹಳ್ಳಿ ಗ್ರಾಮದ ನೀರಾವರಿ ಭೂಮಿಯಲ್ಲಿ ರೈತರನ್ನು ಒಕ್ಕಲೆಬ್ಬಿಸಿ, ನಿಮ್ಹಾನ್ಸ್ ಆಸ್ಪತ್ರೆ ನಿರ್ಮಿಸುವ ಪ್ರಸ್ತಾವವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಮೈಸೂರಿನಲ್ಲಿಯೇ ಸಾಕಷ್ಟು ಸರ್ಕಾರಿ ಭೂಮಿ ಇದೆ. ಅಲ್ಲಿ ಆಸ್ಪತ್ರೆ ನಿರ್ಮಿಸಲಿ ಎಂದರು.

ವಿವಿಧ ಸಂಘಟನೆಗಳ ಪ್ರಮುಖರಾದ ಎಂ.ನಾರಾಯಣ, ಟಿ.ಎಚ್.ಹಾಲೇಶಪ್ಪ, ಹನುಮಮ್ಮ, ಟಿ.ಎಂ.ಚಂದ್ರಪ್ಪ, ಸಿ.ಚಂದ್ರಪ್ಪ, ಹನುಮಂತಪ್ಪ, ಷಣ್ಮುಖಪ್ಪ, ಮಂಜಪ್ಪ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-42-319189978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.