ಮಂಗಳವಾರ, ಸೆಪ್ಟೆಂಬರ್ 28, 2021
22 °C

ರಾಮನಗರ: ಬೀದಿನಾಯಿಗಳ ದಾಳಿ, ಮೂವರು ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚನ್ನಪಟ್ಟಣದ ಇಂದಿರಾ ಕಾಟೇಜ್ ಬಡಾವಣೆಯಲ್ಲಿ ಮಂಗಳವಾರ ಬೀದಿನಾಯಿ‌ಗಳ ದಾಳಿಯಿಂದ  ಮೂವರು ಮಕ್ಕಳು ಗಾಯಗೊಂಡಿದ್ದಾರೆ.

ಮಧ್ಯಾಹ್ನ 3 ಗಂಟೆ‌ ವೇಳೆಗೆ‌‌ ಮನೆ ಮುಂದೆ ಕುಳಿತಿದ್ದ‌ ಮಕ್ಕಳ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿದೆ.

ತಸೀರ್ (5), ನಗೀನಾ (12) ಹಾಗೂ ಮತ್ತೊಬ್ಬ ಬಾಲಕನಿಗೆ ಗಾಯಗಳಾಗಿವೆ.

ಒಬ್ಬ ಬಾಲಕನ ತಲೆ ಹಾಗೂ‌ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಎಲ್ಲ ಮಕ್ಕಳಿಗೂ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು