ಮಂಗಳವಾರ, ಜೂನ್ 22, 2021
27 °C

ಮುಷ್ಕರ ವಾಪಸ್‌: ಪ್ರಯಾಣಿಕರು ನಿರಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ಹಿಂತೆಗೆದುಕೊಂಡಿದ್ದು, ಜಿಲ್ಲೆಯ ಪ್ರಯಾಣಿಕರು ನಿರಾಳ ಆಗಿದ್ದಾರೆ.

ಕಳೆದೆರಡು ವಾರಗಳಿಂದ ನೌಕರರ ಮುಷ್ಕರದಿಂದಾಗಿ ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಅದರಲ್ಲೂ ಬೆಂಗಳೂರಿಗೆ ಉದ್ಯೋಗಕ್ಕೆ ಹೋಗುವವರು, ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಬರುವವರು ಹೆಚ್ಚಿನ ತೊಂದರೆ ಅನುಭವಿಸಿದ್ದರು. ಇದೀಗ ಮುಷ್ಕರ ವಾಪಸ್ ಆಗಿದ್ದು, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸುಗಮವಾಗುವ ಸಾಧ್ಯತೆ ಇದೆ.

ಜಿಲ್ಲೆಯ ನೌಕರರು ಒಬ್ಬೊಬ್ಬರಾಗಿ ಕರ್ತವ್ಯಕ್ಕೆ ಮರಳುತ್ತಿದ್ದಾರೆ. ಗುರುವಾರ ಮುಂಜಾನೆಯಿಂದ ಎಂದಿನಂತೆ ಬಸ್ ಸಂಚಾರ ಆರಂಭ ಆಗಲಿದೆ. ದೂರದ ಊರುಗಳಿಗೂ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು