ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಅಳವಡಿಸಿಕೊಳ್ಳಬೇಕು: ಇಕ್ಬಾಲ್ ಹುಸೇನ್

Published : 26 ಆಗಸ್ಟ್ 2024, 16:10 IST
Last Updated : 26 ಆಗಸ್ಟ್ 2024, 16:10 IST
ಫಾಲೋ ಮಾಡಿ
Comments

ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಹಾಗೂ ಆಚಾರ, ವಿಚಾರಗಳನ್ನು ಅಳವಡಿಸಿಕೊಂಡರೆ ಬದುಕು ಪರಿಪೂರ್ಣವಾಗುತ್ತದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ನಗರದ ಶತಮಾನೋತ್ಸವ ಭವನದಲ್ಲಿ ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಾಕಷ್ಟು ಶ್ರಮಿಸುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವ ಬದಲು, ಉತ್ತಮ ಶಿಕ್ಷಣ ಕೊಡುವ ಮೂಲಕ ಅವರನ್ನೇ ಬೆಲೆಕಟ್ಟಲಾಗದ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳೂ ತಮ್ಮ ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಬೆಂಗಳೂರು ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘುನಂದನ್ ರಾಮಣ್ಣ ಮಾತನಾಡಿ, ‘ವಿದ್ಯಾರ್ಥಿಗಳು ಮಹತ್ತರವಾದ ಗುರಿ ಇಟ್ಟುಕೊಳ್ಳಬೇಕು. ಗುರುಗಳ ಮಾರ್ಗದರ್ಶನದಲ್ಲಿ ಗುರಿ ತಲುಪಲು ಶ್ರಮಿಸಬೇಕು. ಸತತ ಪರಿಶ್ರಮ, ಶ್ರದ್ಧೆ ಹಾಗೂ ಆತ್ಮವಿಶ್ವಾಸ ಉತ್ತಮ ಬದುಕಿನ ಮಾರ್ಗಗಳಾಗಿವೆ’ ಎಂದರು. ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ತಾಲ್ಲೂಕಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ಮುಖ್ಯ ಪಶು ವೈದ್ಯಾಕಾರಿ ಡಾ. ವಿವೇಕಾನಂದ್, ಅಕ್ಕ ಐಎಎಸ್ ಆಕಾಡೆಮಿ ನಿರ್ದೇಶಕ ಶಿವಕುಮಾರ್, ವೈದ್ಯ ಸಂಪಂಗಿ ರಾಮಯ್ಯ, ಪುರ ಠಾಣೆ ಸಬ್ ಇನ್ ಸ್ಪೆಕ್ಟರ್ ಹರೀಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಗಿರೀಶ್, ಸಮಾಜ ಸೇವಕ ಸುಮತಿ ಕುಮಾರ್ ಜೈನ್, ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ, ಮುಖಂಡರಾದ ಆರ್.ಕೆ.ಬೈರಲಿಂಗಯ್ಯ, ಎಸ್.ಸಿ.ಶೇಖರ್, ಜಯಪ್ರಕಾಶ್, ಬಿವಿಎಸ್ ಜಿಲ್ಲಾ ಸಂಯೋಜಕ ಎಸ್.ಕುಮಾರ್, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT