ಭಾನುವಾರ, ಮೇ 22, 2022
21 °C

ತಾಲ್ಲೂಕು ಮಟ್ಟದ ಉಚಿತ ಬೇಸಿಗೆ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ‘ಮಕ್ಕಳ ಮಾನಸಿಕ ಮಟ್ಟ ಚುರುಕುಗೊಳ್ಳಲು ಬೇಸಿಗೆ ಶಿಬಿರಗಳು ಅವಶ್ಯಕ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಅಭಿಪ್ರಾಯಪಟ್ಟರು.

ನಗರದ ತಾಲ್ಲೂಕು ಸ್ತ್ರೀಶಕ್ತಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಬಾಲಭವನ ಸೊಸೈಟಿ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಿಂದ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಉಚಿತ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣ ಚಟುವಟಿಕೆಗಳು ಸ್ಥಗಿತವಾಗಿದ್ದ ಕಾರಣ ಮಕ್ಕಳ ಮನೋವಿಕಾಸಕ್ಕೆ ಸಮಸ್ಯೆ ಎದುರಾಗಿತ್ತು. ಈಗ ಮತ್ತೆ ಮಕ್ಕಳ ಚಟುವಟಿಕೆಗಳು ಆರಂಭವಾಗಿದ್ದು, ಇದನ್ನು ಪೋಷಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾ.ಪಂ. ಇಒ ಚಂದ್ರು ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ. ಮಕ್ಕಳು ಯಾವುದೇ ಕೀಳರಿಮೆ ಹೊಂದದೆ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದರು.

ಸಿಡಿಪಿಒ ಸಿದ್ದಲಿಂಗಯ್ಯ ಅಧ್ಯಕ್ಷತೆವಹಿಸಿದ್ದರು. ನಗರದ ಉಪ ಖಜಾನೆಯ ನಿರ್ದೇಶಕ ರಘುನಂದನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೋಹನ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಅಕ್ಕೂರು ಪ್ರಸಾದ್, ಪ್ರಕಾಶ್, ಬಾಲಭವನ ಸೊಸೈಟಿಯ ಜಿಲ್ಲಾ ಸಂಯೋಜಕ ದಿನೇಶ್, ಯೋಗ ಶಿಕ್ಷಕಿ ಗೀತಾ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.