ರಾಮನಗರ: ಕೋವಿಡ್ ಸೋಂಕಿನ ಸರಪಳಿ ತುಂಡರಿಸುವ ಸಲುವಾಗಿ ಸರ್ಕಾರವು ಹೇರಿದ್ದ ಲಾಕ್ಡೌನ್ಗೆ ಮೂರನೇ ಭಾನುವಾರವೂ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಹಿಂದಿನ ವಾರಕ್ಕೆ ಹೋಲಿಸಿದರೆ ಈ ವಾರದ ಲಾಕ್ಡೌನ್ ಕೊಂಚ ಸಡಿಲವಾಗಿದ್ದು, ದ್ವಿಚಕ್ರ ವಾಹನಗಳ ಓಡಾಟ ಹೆಚ್ಚಿತ್ತು. ಪ್ರಮುಖ ರಸ್ತೆಗಳಲ್ಲಿ ಸಂಚಾರ ವಿರಳವಾಗಿದ್ದರೂ ಒಳ ರಸ್ತೆಗಳಲ್ಲಿ ಓಡಾಟ ಕಂಡು ಬಂದಿತು. ಮಾಂಸದ ಅಂಗಡಿಗಳ ಮುಂದೆ ಜನರ ಸಾಲು ಹೆಚ್ಚಿತ್ತು.

ಜನರು ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೀದಿಗೆ ಇಳಿದಿದ್ದರು. ದಿನಬಳಕೆ ವಸ್ತುಗಳಾದ ದಿನಸಿ, ಹಾಲು, ಮಾಂಸದಂಗಡಿ, ಮೆಡಿಕಲ್ ಸ್ಟೋರ್, ಪೆಟ್ರೋಲ್ ಬಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಎಪಿಎಂಸಿ, ರೇಷ್ಮೆ ಮಾರುಕಟ್ಟೆ ಬಂದ್ ಆಗಿತ್ತು. ಕೆಎಸ್ಆರ್ಟಿಸಿ ಬಸ್ಗಳು, ಆಟೊಗಳ ಸಂಚಾರ ಇರಲಿಲ್ಲ. ಗ್ರಾಮಾಂತರ ಪ್ರದೇಶದಲ್ಲಿ ಲಾಕ್ಡೌನ್ ಹೆಚ್ಚು ಪರಿಣಾಮ ಬೀರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.