ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವೀಧರರ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ

Published 17 ಮೇ 2024, 6:18 IST
Last Updated 17 ಮೇ 2024, 6:18 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಪದವೀಧರರ ಸಮಸ್ಯೆಗಳನ್ನು ನಿವಾರಿಸಲು ಹಲವು ಯೋಜನೆಗಳನ್ನು ಹಾಕಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರನ್ನು ಪದವೀಧರ ಮತದಾರರು ಆಯ್ಕೆ ಮಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮನವಿ ಮಾಡಿದರು.

ನಗರದಲ್ಲಿ ಬುಧವಾರ ಯೋಜಿಸಿದ್ದ ಬೆಂಗಳೂರು ಪಧವೀದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಮೋಜಿಗೌಡ ಅವರು ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸಿ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಮಂದೆ ಮತದಾರರ ನಂಬಿಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾರೆ. ಅವರ ಮೇಲೆ ನಂಬಿಕೆ ಇಟ್ಟು ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇದರ ಜೊತೆಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿ ರಚನೆ ಮಾಡಲಾಗಿದೆ. ಅನುದಾನ ರಹಿತ ಖಾಸಗಿ ಶಾಲೆಯ ಶಿಕ್ಷಕರ ಕುಟುಂಬಕ್ಕೆ ಆರೋಗ್ಯ ವಿಮಾ ಯೋಜನೆ ಜಾರಿ ಮಾಡಲು ಸಾಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮಾತನಾಡಿ, ನಾನು ಶಿಕ್ಷಕನಾಗಿ ವೃತ್ತಿ ಆರಂಭಿಸಿ ಶಿಕ್ಷಕರ ಹಲವಾರು ಹೋರಾಟದಲ್ಲಿ ಭಾಗವಹಿಸಿದ್ದೇನೆ. ಈ ಹಿಂದೆ ಎರಡು ಬಾರಿ ಬೆಂಗಳೂರು ಪಧವೀದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತನಾಗಿದ್ದೇನೆ. ಪದವೀಧರ ನಿರುದ್ಯೋಗಿಗಳ ಸಮಸ್ಯೆಗಳಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಹೋರಾಟ ಮಾಡುವ ಉದ್ದೇಶದಿಂದ ಈ ಬಾರಿಯೂ ಸ್ಪರ್ಧಿಸಿದ್ದೇನೆ. ಮತದಾರರು ನನ್ನ ಹೋರಾಟಕ್ಕೆ ಬೆಂಬಲ ನೀಡಲು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ಗಂಗಮಾರಯ್ಯ, ಜಯರಂಗ, ಒಕ್ಕಲಿಗರ ಸಾರ್ವಜನಿಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿ.ಚನ್ನಪ್ಪ, ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಮುಖಂಡರಾದ ಜಾಲಮಂಗಲ ನಾಗರಾಜ್, ಜಿ.ನಾರಾಯಣಸ್ವಾಮಿ, ಚಂದ್ರಶೇಖರ್, ಒಕ್ಕಲಿಗರ ಸಾರ್ವಜನಿಕ ವಿದ್ಯಾಸಂಸ್ಥೆಯ ನಿರ್ದೇಶಕರಾದ ಎಂ.ಎ. ಮಾಲಿನಿ, ಆನಂದ್, ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕಿರಣ್, ಮಳೂರುಪಟ್ಟಣ ಚಾಮರಾಜು, ನಿವೃತ್ತ ಉಪ ಪ್ರಾಂಶುಪಾಲ ಟಿ.ಎಸ್. ರಂಗಸ್ವಾಮಿ, ನಿವೃತ್ತ ಶಿಕ್ಷಕ ಅಂಕೇಗೌಡ, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT