ಕನಕಪುರ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಲಯನ್ಸ್ ಶಾಲೆಯಲ್ಲಿ ಕನಕಪುರ ಲಯನ್ಸ್ ಮತ್ತು ಲಿಯೋ ಸಂಸ್ಥೆಯಿಂದ ಭಾನುವಾರ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಪರಿಸರ ಪ್ರೇಮಿ ಸಂಘದ ಅಧ್ಯಕ್ಷ ಮರಸಪ್ಪ ರವಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದು ಪ್ರಗತಿ ಸಾಧಿಸುತ್ತಿದ್ದಾರೆ ಎಂದು ತಿಳಿಸಿದರು.

ಮಹಿಳೆಯರು ಎಷ್ಟೇ ಒತ್ತಡವಿದ್ದರೂ ಅದನ್ನು ಲೆಕ್ಕಿಸದೆ ತಾವು ಕೈಗೊಳ್ಳುವ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ಮಹಿಳೆಯರು ಕೈಗೊಳ್ಳುವ ಕೆಲಸಗಳಿಗೆ ಅಡ್ಡಿ ಮಾಡದೆ ಸಂಪೂರ್ಣ ಸಹಕಾರ ನೀಡಿ ಅವರ ಯಶಸ್ವಿಗೆ ಬೆಂಬಲಿಸುವಂತೆ ಮನವಿ ಮಾಡಿದರು.

ಮಹಿಳೆಯರು ಸೋತಾಗ ಧೈರ್ಯ ತುಂಬಿ ಗೆದ್ದಾಗ ಮೆಚ್ಚುಗೆ ವ್ಯಕ್ತಪಡಿಸಬೇಕು. ಇಂತಹ ಕಾರ್ಯಕ್ರಮಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಜತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದರು.

ಲಯನ್ ರೋಹಿಣಿಪ್ರಿಯಾ ಮಾತನಾಡಿ, ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ದಿಟ್ಟ ಹೆಜ್ಜೆ ಇಡುತ್ತಾ ಮುನ್ನಡೆಯುತ್ತಿದ್ದಾರೆ. ಸಾವಿರ ಸವಾಲು ಬಂದರೂ ಹಿಂಜರಿಯದೆ ಧೈರ್ಯವಾಗಿ ಹೆಜ್ಜೆ ಹಾಕುತ್ತಿದ್ದಾರೆ. ಮಹಿಳೆಯರಿಗೆ ದೊರೆತಿರುವ ಹಕ್ಕುಗಳನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವಂತೆ ಕೆರೆ ನೀಡಿದರು.

ಲಯನ್ಸ್ ಸಂಸ್ಥೆಯಿಂದ ಮಹಿಳಾ ಸದಸ್ಯರಿಗೆ ಸಸಿ ವಿತರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ನಂದೀಶ್, ಮೋಹನ್, ಅಶೋಕ್ ಕುಮಾರ್, ಕುಲಕರ್ಣಿ, ಡಾ.ನಾಗೇಶ್ ರಾವ್, ಶಿವಕುಮಾರ್, ಪ್ರಶಾಂತ್, ಸತೀಶ್, ಬಿಳಿಗಿರಿ ರಂಗಸ್ವಾಮಿ, ಗೋಪಾಲ್ ರಾಜ್, ಹರೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.