ಕನಕಪುರ: ಐ.ಗೊಲ್ಲಹಳ್ಳಿ ಗ್ರಾ.ಪಂ ಅಧ್ಯಕ್ಷೆಯಾಗಿ ಸುಶೀಲಾ

ಕನಕಪುರ: ತಾಲ್ಲೂಕಿನ ಐನೋರ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಶೀಲಾ ಸೋಮರಾಜು ಮತ್ತು ಉಪಾಧ್ಯಕ್ಷರಾಗಿ ಶಿವಣ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಯ್ಯಂಬಳ್ಳಿ ಹೋಬಳಿಯ ಐ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯ ಸ್ಥಾನಗಳಿವೆ. ಇದರಲ್ಲಿ 9 ಮಹಿಳೆಯರು ಮತ್ತು 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಬಿ’ಗೆ ಮೀಸಲಾಗಿತ್ತು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಪದ್ಮನಾಭ ಚುನಾವಣಾಧಿಕಾರಿಯಾಗಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವಣ್ಣಸಿದ್ದಯ್ಯ, ಕಾರ್ಯದರ್ಶಿ ಶಿವಮಾದನಾಯ್ಕ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.