ಮಂಗಳವಾರ, ಜುಲೈ 5, 2022
22 °C

ರಾಮನಗರ: ಅಕ್ರಮ ಆರೋಪದ ಮೇಲೆ ಅಮಾನತುಗೊಂಡಿದ್ದ ಪಿಡಿಒ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇ-ಖಾತೆ ಅಕ್ರಮ ಆರೋಪದ ಮೇಲೆ ಅಮಾನತುಗೊಂಡಿದ್ದ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕನಕಪುರ ತಾಲ್ಲೂಕಿನ ಕೊಳ್ಳಿಗನಹಳ್ಳಿಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ.

ಈ ಹಿಂದೆ ಹಾರೋಹಳ್ಳಿ, ಬೈರಮಂಗಲ ಸೇರಿದಂತೆ ವಿವಿಧೆಡೆ ಅಕ್ರಮವಾಗಿ  ಇ-ಖಾತೆ ಮಾಡಿಕೊಟ್ಟ ಆರೋಪದ ಮೇಲೆ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು ಸೈಬರ್ ಪೊಲೀಸರು ಕೆಲವು ತಿಂಗಳ ಹಿಂದೆ ಬೈರಮಂಗಲ ಗ್ರಾ.ಪಂ. ಕಚೇರಿ ಮೇಲೂ ದಾಳಿ ನಡೆಸಿ‌ ದಾಖಲೆ ಪರಿಶೀಲಿಸಿದ್ದರು. ಈ  ಸಂದರ್ಭ ರವಿ ನಾಪತ್ತೆ ಆಗಿದ್ದರು.

ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ರವಿ ಅವರನ್ನು ಜಿ.ಪಂ. ಸಿಇಒ ಇಕ್ರಂ ಈಚೆಗೆ ಸೇವೆಯಿಂದ ಅಮಾನತು‌ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು