ಚನ್ನಪಟ್ಟಣ: ತಾಲ್ಲೂಕಿನ ಚಕ್ಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ ವಿಕಾಸ ಪರಿಷತ್ತು ಕಣ್ವ ಶಾಖೆಯ ಸಹಯೋಗದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಯೋಗೇಶ್ ಚಕ್ಕೆರೆ, ಸ್ವಾಮಿ ವಿವೇಕಾನಂದರು ಭಾರತೀಯರ ಬಗ್ಗೆ ವಿದೇಶಿಗರಲ್ಲಿದ್ದ ಕೀಳರಿಮೆಯನ್ನು ಹೋಗಲಾಡಿಸಿದ ಮಹಾಪುರುಷರು. ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಅವರ ಭಾಷಣ ಭಾರತದ ಘನತೆಯನ್ನು ವಿಶ್ವಮಟ್ಟದಲ್ಲಿ ಎತ್ತಿಹಿಡಿದಿದೆ. ಕೇವಲ 39 ವರ್ಷಗಳ ಜೀವನದಲ್ಲೇ ವಿಶ್ವಮಾನವ ಹಾಗೂ ವೀರ ಸನ್ಯಾಸಿಯಾಗಿ ಹೆಸರು ಪಡೆದರು. ಅವರ ದಿವ್ಯವಾಣಿಗಳು ಯುವಜನತೆಗೆ ಸ್ಪೂರ್ತಿದಾಯಕವಾಗಿವೆ. ವಿವೇಕಾನಂದರ ತತ್ವಗಳನ್ನು ಅನುಸರಿಸಿದರೆ ವ್ಯಕ್ತಿತ್ವ ವಿಕಸನ ಸಾಧ್ಯ ಎಂದರು.

ಭಾರತ ವಿಕಾಸ ಪರಿಷತ್ತಿನ ಅಧ್ಯಕ್ಷ ಪುಟ್ಟಸ್ವಾಮಿಗೌಡ ಮಾತನಾಡಿ, ಸ್ವಾಮಿ ವಿವೇಕಾನಂದರು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದ ಮಹಾನ್ ದಾರ್ಶನಿಕ. ಅವರ ಆದರ್ಶಗಳು ಇಂದಿನ ವಿದ್ಯಾರ್ಥಿ ಮತ್ತು ಯುವಜನತೆಗೆ ಅತ್ಯಂತ ಅಗತ್ಯವಿದೆ. ಜೀವನದಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ದೇಶಭಕ್ತಿ ಬೆಳೆಸಿಕೊಳ್ಳಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ. ಯುವಜನರು ಅವರ ವಿಚಾರಗಳನ್ನು ಅರಿತು ಅನುಸರಿಸಬೇಕು ಎಂದು ಕಿವಿಮಾತು ಹೇಳಿದರು.

ಭಾ.ವಿ.ಪ. ಪ್ರಾಂತ್ಯ ಉಪಾಧ್ಯಕ್ಷ ಗುರುಮಾದಯ್ಯ, ಖಜಾಂಚಿ ವಿ.ಟಿ. ರಮೇಶ್, ಪ್ರಾಂತ್ಯ ಪದಾಧಿಕಾರಿ ಬೆಸ್ಕಾಂ ಶಿವಲಿಂಗಯ್ಯ, ಶಿಕ್ಷಕರಾದ ಬಿ.ಕೆ. ಲತಾ, ಮಧುಸೂದನ್, ವಸಂತರಾಜ್, ಪುಟ್ಟಮ್ಮ, ವಿಶ್ವನಾಥ ಸಿಂಗ್, ಶಶಿಕುಮಾರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.