ಬುಧವಾರ, ಸೆಪ್ಟೆಂಬರ್ 18, 2019
28 °C

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಟಿ.ರವೀಂದ್ರ ಆಯ್ಕೆ

Published:
Updated:
Prajavani

ಚನ್ನಪಟ್ಟಣ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಟಿ.ರವೀಂದ್ರ ಆಯ್ಕೆಯಾದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ದೈಹಿಕ ಶಿಕ್ಷಣಾಧಿಕಾರಿ ನರಸಿಂಹಯ್ಯ ಕಾರ್ಯ ನಿರ್ವಹಿಸಿದರು.

ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವೀರಾಜು, ಖಜಾಂಚಿಯಾಗಿ ವೈ.ಕೆ. ಸುಧಾ, ಸಹ ಕಾರ್ಯದರ್ಶಿಯಾಗಿ ಎ.ಎಂ. ಆನಂದ್, ಸಹ ಸಂಘಟನಾ ಕಾರ್ಯದರ್ಶಿಯಾಗಿ ವಿಜಯಕಾಂತ್ ಆಯ್ಕೆಯಾದರು.

ನೂತನ ಅಧ್ಯಕ್ಷ ರವೀಂದ್ರ ಮಾತನಾಡಿ, ‘ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳಿಗೆ, ಪ್ರತಿಯೊಬ್ಬರ ಸಹಕಾರ ಪಡೆದು ಸ್ಪಂದಿಸಲಾಗುವುದು’ ಎಂದರು.

Post Comments (+)