ಚನ್ನಪಟ್ಟಣ: ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಬಿ.ಕೆ. ಸುದರ್ಶನ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದು, ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ.

ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಸುದರ್ಶನ್ ಅವರನ್ನು ನೇಮಿಸಿ ಕಂದಾಯ ಇಲಾಖೆ ಆದೇಶಿಸಿದೆ.

ನಿರ್ಗಮಿತ ತಹಶೀಲ್ದಾರ್ ನಾಗೇಶ್ರನ್ನು ಏ. 8ರಂದು ಸಂಜೆ ವರ್ಗಾವಣೆಗೊಳಿಸಿ ಅಂದಿನ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ) ಎಂ.ಎಸ್. ರಶ್ಮಿ ಆದೇಶಿಸಿದ್ದರು. ಅವರ ಜಾಗಕ್ಕೆ ಸುದರ್ಶನ್ರನ್ನು ನಿಯುಕ್ತಿಗೊಳಿಸಲಾಗಿತ್ತು. ನಂತರ ಅಂದು ರಾತ್ರಿಯೇ ನಾಗೇಶ್ರನ್ನು ವರ್ಗಾವಣೆ ಆದೇಶವನ್ನು ಹಿಂಪಡೆದಿರುವುದಾಗಿ ರಶ್ಮಿ ಮರು ಆದೇಶ ಹೊರಡಿಸಿದ್ದರು. ಒಂದೇ ದಿನ ನಡೆದ ಈ ವರ್ಗಾವಣೆ ಪ್ರಹಸನವು ತಾಲ್ಲೂಕಿನಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಈ ವರ್ಗಾವಣೆಯಲ್ಲಿ ಶಾಸಕ ಎಚ್.ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪಾತ್ರವಿದೆ ಎಂದು ಚರ್ಚಿತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.