ಕ್ಷಯರೋಗ ಪತ್ತೆ ಆಂದೋಲನ 15ರಿಂದ

ಬುಧವಾರ, ಜೂಲೈ 24, 2019
28 °C

ಕ್ಷಯರೋಗ ಪತ್ತೆ ಆಂದೋಲನ 15ರಿಂದ

Published:
Updated:

ರಾಮನಗರ: ಸಾಂಕ್ರಾಮಿಕ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಕ್ಷಯರೋಗ ಪತ್ತೆ ಆಂದೋಲನವನ್ನು ಇದೇ 15 ರಿಂದ 27ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಹೇಳಿದರು.

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಶುಕ್ರವಾರ ನಡೆದ ಕ್ಷಯ ರೋಗ ನಿರ್ಮೂಲನಾ ಆಂದೋಲನ ಸಭೆಯಲ್ಲಿ ಅವರು ಮಾತನಾಡಿದರು. ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಕ್ಷಯ ರೋಗದ ನಿರ್ಮೂಲನೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಈ ಲಕ್ಷಣಗಳ ಬಗ್ಗೆ, ನಿರ್ಮೂಲನೆಗೆ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಬೇಕು. ವಿವಿಧ ಇಲಾಖೆಗಳ ಸಹಕಾರದಲ್ಲಿ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಟಿ. ಅರುಣ್ ಕುಮಾರ್ ಮಾತನಾಡಿ, ಆರೋಗ್ಯ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಬೇಕು. ಕ್ಷಯ ರೋಗದ ಮುಖ್ಯ ಲಕ್ಷಣಗಳಾದ ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದೇ ಇರುವುದು ಕಂಡು ಬಂದರೆ ಅವರಿಂದ ಕಫ ಶೇಖರಣೆ ಮಾಡಿ ಅದನ್ನು ಆಸ್ಪತ್ರೆಗೆ ಸಾಗಿಸಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಕ್ಷಯ ರೋಗ ಪತ್ತೆಯಾದಲ್ಲಿ ಅವರಿಗೆ ಉಚಿತವಾದ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆ ನೀಡಲಾಗುವುದು. ಈ ಸೌಲಭ್ಯವು ಹತ್ತಿರದ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೊರೆಯುತ್ತದೆ ಎಂದು ಅವರು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜೆ. ವಿಜಯನರಸಿಂಹ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !