ಭಾನುವಾರ, ಜನವರಿ 19, 2020
28 °C

ಸಾಧಕ ಶಿಕ್ಷಕರ ಅಭಿನಂದನೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇದೇ 23ರಂದು ಬೆಳಿಗ್ಗೆ 10.30ಕ್ಕೆ ಸಾಧಕ ಶಿಕ್ಷಕರ ಅಭಿನಂದನಾ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಬಿ. ಬಸವರಾಜಪ್ಪ ತಿಳಿಸಿದರು.

2019ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರು ಮತ್ತು ವಿಷಯವಾರು ಅತಿ ಹೆಚ್ಚು ಅಂಕಗಳು ಬರಲು ಕಾರಣರಾದ ಒಟ್ಟು 150 ಶಿಕ್ಷಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಪ್ರೊ. ಅನಂತ್ ಕುಮಾರ್ ಅವರು ‘ಶಿಕ್ಷಕರಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಆವಿಷ್ಕಾರಿ ಬೋಧನಾ ಕೌಶಲಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಮಾರಂಭವನ್ನು ಸಂಸದ ಡಿ.ಕೆ. ಸುರೇಶ್ ಉದ್ಘಾಟಿಸಲಿದ್ದು, ಶಾಸಕಿ ಅನಿತಾಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾದ ಸಿ.ಎಂ. ಲಿಂಗಪ್ಪ, ಪುಟ್ಟಣ್ಣ, ಅ. ದೇವೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್. ಬಸಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜ್, ಮುಖಂಡ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು