ಶುಕ್ರವಾರ, ಫೆಬ್ರವರಿ 21, 2020
18 °C

ಮಾಗಡಿ ಹನುಮಂತಪುರದಲ್ಲಿ ಇಂದಿನಿಂದ ಪ್ರತಿಷ್ಠಾಪನಾ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ತಾಲ್ಲೂಕಿನ ಹನುಮಂತಪುರದಲ್ಲಿ ಫೆ.6 ರಿಂದ 7 ರವರೆಗೆ ಆದಿಶಕ್ತಿ ಮಾರಮ್ಮ ದೇವಿ ನೂತನ ಸ್ಥಿರಬಿಂಬ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪಕ ಎಚ್‌.ಕೆ.ಶಿವರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 6 ರಂದು ಸಂಜೆ ಗಂಗಾಪೂಜೆ ಪೀಠಾ ಪೂಜೆ ನಡೆಯಲಿದೆ.

7ರಂದು ಬ್ರಾಹ್ಮೀ ಮಹೂರ್ತದಲ್ಲಿ ಪ್ರಾಣಪ್ರತಿಷ್ಠೆ ಹೋಮಾದಿಗಳು ನಡೆಯಲಿವೆ. ಬೆಳಿಗ್ಗೆ 11 ಗಂಟೆಗೆ ಸಂಸದ ಡಿ.ಕೆ.ಸುರೇಶ್‌ ಧಾರ್ಮಿಕ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಎ.ಮಂಜುನಾಥ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ, ಪಾಲನಹಳ್ಳಿ ಶನೇಶ್ವರ ಕ್ಷೇತ್ರದ ಡಾ.ಸಿದ್ದರಾಜ ಸ್ವಾಮಿ, ಬಿದನಗೆರೆ ಶನೇಶ್ವರ ಕ್ಷೇತ್ರದ ಧನಂಜಯ ಸ್ವಾಮಿ, ತಹಶೀಲ್ದಾರ್‌ ಎನ್‌.ರಮೇಶ್‌ ಭಾಗವಹಿಸುವರು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)