ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ರಮೇಯಸ್ವಾಮಿ ಬ್ರಹ್ಮ ರಥೋತ್ಸವ

Last Updated 16 ಏಪ್ರಿಲ್ 2022, 4:48 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ದೊಡ್ಡಮಳೂರು ಅಪ್ರಮೇಯಸ್ವಾಮಿ ಬ್ರಹ್ಮ ರಥೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ರಥ ಎಳೆದು, ಹೂವು, ಹಣ್ಣು, ಜವನ ಎಸೆದು ಪುನೀತರಾದರು. ರಥವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಥೋತ್ಸವದ ಪ್ರಯುಕ್ತ ಕಳೆದ ಒಂದು ವಾರದಿಂದ ಅಂಕುರಾರ್ಪಣ, ಹಂಸಾರೋಹಣ, ಕಲ್ಯಾಣ ಮಹೋತ್ಸವ, ವೈರಮುಡಿ ಮುಂತಾದ ದೇವತಾ ಕಾರ್ಯಗಳು ನಡೆದಿದ್ದವು.

ರಥೋತ್ಸವದಂದು ನೇರವಾಗಿ ಸೂರ್ಯ ರಶ್ಮಿ ಅಪ್ರಮೇಯ ಸ್ವಾಮಿಯ ಪಾದಗಳ ಮೇಲೆ ಬೀಳುವುದು ವಿಶೇಷವಾಗಿದ್ದು, ಈ ಅಚ್ಚರಿ ವೀಕ್ಷಿಸಲು ಭಕ್ತರು ಜಮಾಯಿಸಿದ್ದರು. ಜೊತೆಗೆ, ಅಪ್ರಮೇಯಸ್ವಾಮಿಗೆ ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು.

ತಾಲ್ಲೂಕಿನ ನೂರಾರು ಮಂದಿ ಭಕ್ತರಲ್ಲದೆ ಅಕ್ಕಪಕ್ಕದ ತಾಲ್ಲೂಕು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮಳೂರು ಗ್ರಾಮ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿದೆ. ಇದರಿಂದ ಜಾತ್ರೆ ಪ್ರಯುಕ್ತ ನೂರಾರು ಮಂದಿ ಸೇರಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಪೊಲೀಸರು ಸ್ಥಳದಲ್ಲಿ ಹಾಜರಿದ್ದು ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಶಾಸಕ ಎಚ್.ಡಿ. ಕುಮಾರಸ್ವಾಮಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್ ನಾಗೇಶ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ, ಮುಜರಾಯಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT