ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Last Updated 25 ಸೆಪ್ಟೆಂಬರ್ 2020, 1:54 IST
ಅಕ್ಷರ ಗಾತ್ರ

ಮಾಗಡಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಗುರುವಾರಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿ, ‘ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ನಿರ್ಣಯದಂತೆ ಎರಡು ದಿನ ಮುಷ್ಕರ ನಡೆಸುತ್ತಿದ್ದೇವೆ. ನೌಕರರಿಗೆ ಕನಿಷ್ಠ ವೇತನವನ್ನು ಸರಿಯಾಗಿ ನೀಡುತ್ತಿಲ್ಲ. ಕನಿಷ್ಠ ವೇತನ ನೀಡಿ ಗುಲಾಮರಂತೆ ದುಡಿಸಿಕೊಳ್ಳಲಾಗುತ್ತಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಕರ್ತವ್ಯಕ್ಕೆ ಹಾಜರಾಗಿಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದೇವೆ’ ಎಂದರು.

ಶುಶ್ರೂಷಕಿ ಇಂದ್ರ ಮಾತನಾಡಿ, ‘12 ವರ್ಷಗಳಿಂದಲೂ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಕಷ್ಟಗಳನ್ನು ಕೇಳುವವರಿಲ್ಲ. ಸಮಸ್ಯೆ ಪರಿಹರಿಸಿ ಸೇವೆ ಖಾಯಂಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಘದಿಂದ ಮನವಿ ಸಲ್ಲಿಸಿದ್ದೇವೆ’ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಸತೀಶ್‌ ಮತ್ತು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ರಾಜೇಶ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಶುಶ್ರೂಷಕಿ ಶಾಂತಕುಮಾರಿ, ಶ್ಯಾಮಲಾ, ಕೆ.ಶಿಲ್ಪ, ನೇತ್ರಾವತಿ, ಅರುಣಾಕ್ಷಿ, ಚಂದ್ರಮ್ಮ, ಭಾಗ್ಯಾ, ಶಿವಮ್ಮ, ಬಿ.ಎಂ.ಮಂಜುಳಾ, ಶೋಭಾ, ಪುಷ್ಪಲತಾ, ಲಕ್ಷ್ಮಿ, ರೇಖಾ, ಗೌತಮ್‌, ನಾರಾಯಣಮ್ಮ, ಚಿಕ್ಕಲಿಂಗಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT