ಬುಧವಾರ, ಮೇ 18, 2022
23 °C

ದೇವಾಲಯ ಜೀರ್ಣೋದ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ತಾಲ್ಲೂಕಿನ ಕೆಂಪಸಾಗರದಲ್ಲಿ ಜೀರ್ಣೋದ್ಧಾರಗೊಂಡಿರುವ ವಿಶ್ವೇಶ್ವರಸ್ವಾಮಿ ದೇವಾಲಯದ ಪುನರ್‌ ಪ್ರತಿಷ್ಠಾಪನೆಯ ಅಂಗವಾಗಿ ಕೆರೆಯಲ್ಲಿ ಗಂಗಾಪೂಜೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ, ಎಪಿಎಂಸಿ ನಿರ್ದೇಶಕ ಕೆ.ಟಿ. ಮಂಜುನಾಥ್‌, ಚಂದ್ರಶೇಖರ್‌ ಕುಟುಂಬದವರು ಗಂಗಾಪೂಜೆಯ ನಂತರ ಗಂಗಾ ಜಲವನ್ನು ಮಂಗಳವಾದ್ಯಗಳ ಸಹಿತ ಮೆರವಣಿಗೆಯಲ್ಲಿ ದೇವಾಲಯದ ಪೌಳಿಗೆ ತಂದು ಪೂಜೆ ಸಲ್ಲಿಸಿದರು.

ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಂಚುಗಲ್‌ ಬಂಡೇ ಮಠಾಧ್ಯಕ್ಷ ಬಸವಲಿಂಗ ಸ್ವಾಮೀಜಿ, ಬೆಟ್ಟಹಳ್ಳಿ ಮಠಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.