ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕ ಪ್ರದರ್ಶನ ಇಂದು

Last Updated 1 ಆಗಸ್ಟ್ 2021, 3:43 IST
ಅಕ್ಷರ ಗಾತ್ರ

ರಾಮನಗರ: ರಾವಣಾಸುರ ಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇಲ್ಲಿನ ಜಾನಪದ ಲೋಕದಲ್ಲಿ ಆಗಸ್ಟ್ 1ರಂದು ಸಂಜೆ 6 ಗಂಟೆಗೆ ಸಾಹಿತಿ ಡಾ.ಎಚ್.ಎಸ್. ಶಿವಪ್ರಕಾಶ್ ರಚಿಸಿರುವ, ಡಾ.ಕೆ. ರಾಮಕೃಷ್ಣಯ್ಯ ನಿರ್ದೇಶಿಸಿರುವ ‘ಮಂಟೆಸ್ವಾಮಿ ಕಥಾ ಪ್ರಸಂಗ’ ನಾಟಕ ಪ್ರದರ್ಶನ ನಡೆಯಲಿದೆ.

ಪ್ರದರ್ಶನವನ್ನು ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ನಾಗೇಶ ವಿ. ಬೆಟ್ಟಕೋಟೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಲೇಜಿನಲ್ಲಿ ಲಸಿಕೆ ಕಾರ್ಯಕ್ರಮ

ರಾಮನಗರ: ನಗರದ ಎಂ.ಎಂ.ಯು ಫಾರ್ಮಸಿ ಕಾಲೇಜಿನಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ, ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಶಿಬಿರ ನಡೆಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರಾಮಬಾಣವಾಗಿದ್ದು, ವಿದ್ಯಾರ್ಥಿಗಳು ಮತ್ತು ಬೋಧಕ ವೃಂದ ಲಸಿಕೆ ಪಡೆದು ಸೋಂಕು ಮುಕ್ತ ಕಾಲೇಜು ನಿರ್ಮಿಸಲು ಸಲಹೆ ನೀಡಿದರು. ಪ್ರಾಚಾರ್ಯ ಡಾ.ಮಹಮ್ಮದ್ ಖಲೀಲ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಶಾಲಿನಿ, ಆಶಾ ಕಾರ್ಯಕರ್ತೆ ಮಾಲಾಶ್ರೀ, ಉಪನ್ಯಾಸಕರು ಹಾಗೂ ಕಾಲೇಜು ಸಿಬ್ಬಂದಿ ಹಾಜರಿದ್ದರು.

ಗುತ್ತಿಗೆ ಆಧಾರ ನೇಮಕಾತಿಗೆ ಅರ್ಜಿ

ರಾಮನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯನ್ನು ರಾಮನಗರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾಂಗಣ ಇಲ್ಲಿ ಅರ್ಜಿ ಪಡೆದು ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲಾತಿಯೊಂದಿಗೆ ಅರ್ಜಿಯನ್ನು ಆಗಸ್ಟ್ 9 ರೊಳಗೆ ಸಲ್ಲಿಸಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27274655 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕ್ರೀಡಾಪಟುಗಳಿಗೆ ನಗದು ಪುರಸ್ಕಾರ

‌ರಾಮನಗರ: 2020ನೇ ಸಾಲಿನಲ್ಲಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಂಡು ಪದಕ ಪಡೆದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆ. 24ರ ಒಳಗೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ದೂರವಾಣಿ ಸಂಖ್ಯೆ 080-27274655 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಪಂಗಡದವರಿಗೆ ವಿವಿಧ ಯೋಜನೆ

ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ. ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 080-29911115 ಸಂಪರ್ಕಿಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT