ಗುರುವಾರ , ಮಾರ್ಚ್ 23, 2023
30 °C

ಸೋಲಿಗ ಕುಟುಂಬದ ಬದುಕು ಕಸಿದ ಕಳ್ಳರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಸಹೃದಯಿಗಳ ನೆರವಿನಿಂದ ಉತ್ತಮ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದ ಸೋಲಿಗ ಕುಟುಂಬವೊಂದರ ಕನಸನ್ನು ಕಳ್ಳರು ನುಚ್ಚುನೂರು ಮಾಡಿದ್ದಾರೆ.

ಪಟ್ಟಣದ ತಿರುಮಲೆ ಪ್ರದೇಶದಲ್ಲಿ ಕೊಳೆಗೇರಿ ನಿರ್ಮೂಲನಾ ಮಂಡಳಿಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ ಶೆಡ್‌ನಲ್ಲಿ ಆಶ್ರಯ ಪಡೆದುಕೊಂಡಿದ್ದ ಈ ಕುಟುಂಬಕ್ಕೆ ದಾನಿಗಳು ನೀಡಿದ್ದ ದವಸ–ಧಾನ್ಯ, ಬಟ್ಟೆ, ಹಣ ಎಲ್ಲವನ್ನೂ ಕಳ್ಳರು ಗುರುವಾರ ರಾತ್ರಿ ದೋಚಿದ್ದಾರೆ.

ಸೋಲಿಗ ಸಮುದಾಯಕ್ಕೆ ಸೇರಿದ ಭೀಮ (ಮಂಜುನಾಥ್) ಮತ್ತವರ ಕುಟುಂಬ ಯಾವುದೇ ಆಸರೆ ಇಲ್ಲದೆ ಭಿಕ್ಷಾಟನೆ ಮಾಡಿ ಬಯಲಿನಲ್ಲೇ ಮಕ್ಕಳೊಂದಿಗೆ ವಾಸವಿರುವ ಸಂಕಷ್ಟದ ಕುರಿತು ‘ಪ್ರಜಾವಾಣಿ’ ಜೂನ್‌ 14ರಂದು ವರದಿ ಪ್ರಕಟಿಸಿತ್ತು. ಈ ವರದಿಗೆ ನಾಡಿನ ವಿವಿಧೆಡೆಯಿಂದ ಜನರು ಸ್ಪಂದಿಸಿದ್ದು, ವರ್ಷಕ್ಕೆ ಆಗುವಷ್ಟು ಧಾನ್ಯ ಮತ್ತಿತರ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದರು.

ಘಟನೆ ಕುರಿತು ಮಾಗಡಿ ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್‌ ಪ್ರತಿಕ್ರಿಯಿಸಿದ್ದು ‘ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಸೋಲಿಗ ಕುಟುಂಬಕ್ಕೆ ತಾತ್ಕಾಲಿಕ ಮನೆ ಜೊತೆಗೆ ಅಗತ್ಯ ಅನುಕೂಲ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು