ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಲಯಗಳಲ್ಲಿ ಕಳವು: ದೂರು ದಾಖಲು

Published 19 ಜನವರಿ 2024, 13:53 IST
Last Updated 19 ಜನವರಿ 2024, 13:53 IST
ಅಕ್ಷರ ಗಾತ್ರ

ಕುದೂರು: ಸೋಲೂರು ಹೋಬಳಿಯ ಉದ್ದೇನಹಳ್ಳಿ ಗ್ರಾಮದಲ್ಲಿ ಒಂದೇ ದಿನ ಎರಡು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದೆ.

ಉದ್ದೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 500 ಗ್ರಾಂ ತೂಕದ ಬೆಳ್ಳಿ ಕಿರೀಟ ಹಾಗೂ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ಜತೆಗೆ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಮೈಮೇಲಿದ್ದ ನಾಲ್ಕು ಚಿನ್ನದ ತಾಳಿ, ಎರಡು ಬೆಳ್ಳಿ ತಾಳಿ ಮತ್ತು ನಾಲ್ಕು ಗಂಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೇವಾಲಯದ ಅರ್ಚಕ ಕೃಷ್ಣಮೂರ್ತಿ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT