ಮಂಗಳವಾರ, ಮೇ 26, 2020
27 °C

ನಿಜಾಮುದ್ದೀನ್‌ನಿಂದ ಬಂದ ವ್ಯಕ್ತಿಯಲ್ಲಿ ಸೋಂಕು ಲಕ್ಷಣ ಇಲ್ಲ: ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ದೆಹಲಿಯ ನಿಜಾಮುದ್ದೀನ್‌ನಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ‌ವ್ಯಕ್ತಿಯೊಬ್ಬರು ‍ಆಗಮಿಸಿದ್ದು, ಅವರು ಕೋವಿಡ್‌–19ಕ್ಕೆ ತುತ್ತಾಗಿದ್ದಾರೆ ಎಂಬ ವದಂತಿಯು ಪಟ್ಟಣದಲ್ಲಿ ಹರಡಿದ್ದು ಜನರಲ್ಲಿ ಆತಂಕ ಮನೆ ಮಾಡಿತ್ತು. 

ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಬೆಳಿಗ್ಗೆ ಮೂಲಕ ಹರಿದಾಡುತ್ತಿದ್ದಂತೆ ತಹಶೀಲ್ದಾರ್ ನರಸಿಂಹಮೂರ್ತಿ, ಆರೋಗ್ಯ ಇಲಾಖೆ ಮತ್ತು ಪುರಸಭಾ ಅಧಿಕಾರಿಗಳು ವ್ಯಕ್ತಿಯ ಮಾಹಿತಿ ಕಲೆಹಾಕಲು ದೌಡಾಯಿಸಿದರು.

ಆದರೆ, ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಸೋಂಕು ಲಕ್ಷಣಗಳಿಲ್ಲ. ಬಿಡದಿಯಿಂದ ದೆಹಲಿಗೆ ಆರು ಮಂದಿ ತೆರಳಿದ್ದರು. ಅವರಲ್ಲಿ ಒಬ್ಬರು ಮಾತ್ರ ಬಿಡದಿಗೆ ಹಿಂದಿರುಗಿದ್ದಾರೆ. ಉಳಿದವರು ದೆಹಲಿಯಲ್ಲಿಯೇ ಇದ್ದಾರೆ. ಬಂದಿರುವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ತಹಶೀಲ್ದಾರ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.

ಇಂದಿರಾನಗರ ಬಿಡದಿ ಮುಖ್ಯರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ವ್ಯಕ್ತಿಗಳ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ಸಂಜೆವರೆಗೂ ಅಧಿಕಾರಿಗಳು ನಿರತರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು