ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ: ಇಎಸ್‌ಐ ಆಸ್ಪತ್ರೆಗೆ ಚಿಂತನೆ

ಕೇಂದ್ರ ಸರ್ಕಾರದ ಮೇಲೆ ಮಂಜೂರಿಗೆ ಒತ್ತಡ: ಶಾಸಕ ಎ. ಮಂಜುನಾಥ್‌
Last Updated 25 ಜುಲೈ 2021, 3:52 IST
ಅಕ್ಷರ ಗಾತ್ರ

ಬಿಡದಿ: ಕೇತಗಾನಹಳ್ಳಿ ರಸ್ತೆಯಹೌಸಿಂಗ್ ಬೋರ್ಡ್ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ಕಟ್ಟಡ ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸುವ ಕಾರ್ಯಕ್ರಮವನ್ನುಶಾಸಕಎ.ಮಂಜುನಾಥ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು,ಕೈಗಾರಿಕಾ ಪ್ರದೇಶಗಳ ನಡುವೆ ಸುಸಜ್ಜಿತ ಇ.ಎಸ್.ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬಿಡದಿ-ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಈಆಸ್ಪತ್ರೆ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ.ಇದಕ್ಕೆಸರ್ಕಾರದಿಂದಲೇ ₹ 100 ಕೋಟಿಅನುದಾನ ಸಿಗಲಿದೆಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ‌‌.ಸಿ.ಎನ್. ಅಶ್ವತ್ಥನಾರಾಯಣಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರದಿಂದಕಾರ್ಮಿಕರಿಗಾಗಿ ಇ.ಎಸ್.ಐ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮೋದನೆ ಕೊಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಪ್ರಸ್ತುತ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿಲ್ಲದ ಕಾರಣ ತುರ್ತು ಸನ್ನಿವೇಶದಲ್ಲಿ ಸರಿಯಾದ ಚಿಕಿತ್ಸೆ ದೊರಕುತ್ತಿಲ್ಲ. ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಅನಿವಾರ್ಯವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಿಡದಿಹಾಗೂ ಸುತ್ತಮುತ್ತಲಿನ ಲಕ್ಷಾಂತರ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಇ.ಎಸ್.ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ. ಹೀಗಾಗಿ ಶೀಘ್ರವೇ ಆಸ್ಪತ್ರೆಗೆ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರುಹಾಗೂ ವಿವಿಧ ವೃತ್ತಿಯಲ್ಲಿರುವ ಕಾರ್ಮಿಕರಿಗೆಬೆನ್ನೆಲುಬಾಗಿ ಸರ್ಕಾರಕೆಲಸ ಮಾಡುತ್ತಿದೆ. ಈಗಾಗಲೇ, ಸರ್ಕಾರದಿಂದ ಮಾಗಡಿ ಕ್ಷೇತ್ರದ ಕಾರ್ಮಿಕರಿಗೆ ಐದು ಸಾವಿರ ಆಹಾರ ಕಿಟ್‌ ಬಂದಿವೆ.ಇನ್ನೂ ಹೆಚ್ಚಿನ ಕಿಟ್ ಪೂರೈಸುವ ಭರವಸೆಯನ್ನು ಕಾರ್ಮಿಕ ಸಚಿವರುನೀಡಿದ್ದಾರೆ ಎಂದು ಹೇಳಿದರು.

ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ,ಕಾರ್ಮಿಕಇಲಾಖೆಯಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಸಿಗಲಿವೆ. ಆದ್ದರಿಂದ ಕಾರ್ಮಿಕರು ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಕೊಂಡು ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ಪಂಚಾಯಿತಿವಾರು ಕಾರ್ಮಿಕರ ನೋಂದಣಿ ಕುರಿತು ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳುಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT