ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ: ಮಳೆ ನೀರು ನುಗ್ಗಿ ಸಾವಿರಾರು ಕೋಳಿ ಸಾವು

Last Updated 16 ನವೆಂಬರ್ 2021, 4:34 IST
ಅಕ್ಷರ ಗಾತ್ರ

ಬಿಡದಿ: ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೋಳಿ ಫಾರಂಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಹೋಬಳಿಯ ಹೆಗ್ಗಡಗೆರೆ ಗ್ರಾಮದಲ್ಲಿ ನಡೆದಿದೆ.

ಹೆಗ್ಗಡಗೆರೆ ಗ್ರಾಮದ ರೈತ ಮಹಿಳೆ ಆರ್. ಶೋಭಾ ಅವರಿಗೆ ಸೇರಿದ ಕೋಳಿ ಫಾರಂನಲ್ಲಿ ಪ್ರತ್ಯೇಕ ಶೆಡ್‌ಗಳಲ್ಲಿ 6 ಸಾವಿರಕ್ಕೂ ಹೆಚ್ಚು ಕೋಳಿಗಳನ್ನು ಸಾಕಣೆ ಮಾಡಲಾಗುತ್ತಿತ್ತು.

‘ಭಾನುವಾರ ರಾತ್ರಿ ಸುರಿದ ಮಳೆಯಿಂದ ಒಂದು ಶೆಡ್ಡಿನಲ್ಲಿದ್ದ 15 ದಿನದ ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿವೆ. ಅಲ್ಲದೇ, ಅದೇ ಶೆಡ್ಡಿನಲ್ಲಿದ್ದ 40 ಸಾವಿರಕ್ಕೂ ಅಧಿಕ ಮೌಲ್ಯದ ಕೋಳಿ ಆಹಾರ (ಫೀಡ್ಸ್), ಹೊಟ್ಟು ಹಾಳಾಗಿವೆ. ಅಲ್ಲದೇ, ಶೆಡ್ಡಿಗೂ ಅಲ್ಪ ಪ್ರಮಾಣದ ಹಾನಿಯಾಗಿದೆ. ಒಟ್ಟಾರೆ ಒಂದು ಲಕ್ಷ ರೂಪಾಯಿನಷ್ಟು ನಷ್ಟವಾಗಿದೆ’ ಎಂದು ರೈತ ಮಹಿಳೆ ಶೋಭಾ ಸಂಕಷ್ಟ ತೋಡಿಕೊಂಡರು.

‘ಇನ್ನು 15-20 ದಿನ ಕಳೆದಿದ್ದರೇ ಸಾವಿರಾರು ರೂಪಾಯಿ ರೈತ ಮಹಿಳೆಗೆ ಆದಾಯ ಬರುತ್ತಿತ್ತು. ವರುಣನ ಆರ್ಭಟದಿಂದ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಕಂಗಾಲಾಗಿರುವ ಈ ರೈತ ಮಹಿಳೆಗೆ ಜಿಲ್ಲಾಡಳಿತ ಪ್ರಕೃತಿ ವಿಕೋಪ ನಿಧಿಯಡಿಯಲ್ಲಿ ಪರಿಹಾರ ನೀಡಬೇಕು’ ಎಮದು ಹೆಗ್ಗಡಗೆರೆ ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT