ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಎಂನಿಂದ ಮೂರು ನೀರಿನ ಘಟಕ ಲೋಕಾರ್ಪಣೆ

Published 16 ಮೇ 2023, 5:43 IST
Last Updated 16 ಮೇ 2023, 5:43 IST
ಅಕ್ಷರ ಗಾತ್ರ

ಬಿಡದಿ (ರಾಮನಗರ): ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಇರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿಯು ರಾಮನಗರ ಹಾಗೂ ನೆರೆಯ ಮಂಡ್ಯ ಜಿಲ್ಲೆಯಲ್ಲಿ ಜನರ ಉಪಯೋಗಕ್ಕಾಗಿ ಮೂರು ಆಧಾರಿತ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಹಂಚಿಕುಪ್ಪೆ ಗ್ರಾ.ಪಂ ವ್ಯಾಪ್ತಿಯ ಹಂಚಿಕುಪ್ಪೆ ಹಾಗೂ ಮಂಡ್ಯ ಜಿಲ್ಲೆಯ ಮಂಡ್ಯ ತಾಲ್ಲೂಕಿನ ಕಿಲಾರ ಗ್ರಾ.ಪಂ. ವ್ಯಾಪ್ತಿಯ ಕಿಲಾರ, ಶ್ರೀಗಿರಿಪುರ ಗ್ರಾಮ ಪಂಚಾಯಿತಿಯ ಚಿಕ್ಕಮಸ್ಕಲ್ ಗ್ರಾಮಗಳಲ್ಲಿ ಈ ಘಟಕಗಳನ್ನು ಸ್ಥಾಪಿಸಲಾಗಿದೆ.

ಪ್ರತಿಯೊಂದು ಘಟಕಗಳು 6 ಹಂತದ ಶುದ್ಧೀಕರಣ ಮತ್ತು ನೈಜ ಸಮಯದ ನೀರಿನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಳಸಿಕೊಂಡಿದ್ದು, ಗಂಟೆಗೆ 1 ಸಾವಿರ ಲೀಟರ್ ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿವೆ. ಇದಲ್ಲದೆ, ಸೌರ ವ್ಯವಸ್ಥೆ, ವಿದ್ಯುತ್ ಬ್ಯಾಕಪ್ ಮತ್ತು ತ್ಯಾಜ್ಯ ನೀರು ನಿರ್ವಹಣಾ ಕಾರ್ಯವಿಧಾನವನ್ನು ಹೊಂದಿದೆ. ಇದರ ನಿರ್ವಹಣೆಗಾಗಿ ಕಂಪನಿಯು ಸಂಬಂಧಿಸಿದ ಏಜೆನ್ಸಿ ಜೊತೆಗೆ 15 ವರ್ಷದ ಒಪ್ಪಂದ ಮಾಡಿಕೊಂಡಿದೆ.

ಈ ಮೂರು ಕುಡಿಯುವ ನೀರಿನ ಘಟಕಗಳಿಂದ ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ 18 ಗ್ರಾಮಗಳ 30 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಟಿಕೆಎಂ ಇಲ್ಲಿಯವರೆಗೆ 46 ನೀರಿನ ಘಟಕಗಳನ್ನು ಸ್ಥಾಪಿಸಿದ್ದು, 285 ಹಳ್ಳಿಗಳಲ್ಲಿ 3.1 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಪ್ರಯೋಜನವಾಗಿದೆ ಎಂದು ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT