ಮಂಗಳವಾರ, ಅಕ್ಟೋಬರ್ 26, 2021
23 °C

ವಾಣಿಜ್ಯ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ವೆಂಕಟೇಶ್ವರ್ ಇನ್‌ಸ್ಟಿಟ್ಯೂಟ್‌ ಆಫ್‌ ಕಾಮರ್ಸ್‌ನ ಏಳು ವಿದ್ಯಾರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು ಕಳೆದ ಏಪ್ರಿಲ್‌ನಲ್ಲಿ ನಡೆಸಿದ ವಾಣಿಜ್ಯ ಶಿಕ್ಷಣ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗಿದ್ದಾರೆ.

ಸೀನಿಯರ್ಸ್ ಇಂಗ್ಲಿಷ್ ಬೆಳರಚ್ಚು ವಿಭಾಗದಲ್ಲಿ ಕೆ. ಯಶಸ್ವಿನಿ ಶೇ 90, ಸಿ. ಮೇಘಾ ಶೇ 90, ಕನ್ನಡ ಬೆರಳಚ್ಚು ವಿಭಾಗದಲ್ಲಿ ಪ್ರೇಮಲತಾ ಶೇ 87 ಅಂಕ ಪಡೆದಿದ್ದಾರೆ. ಜೂನಿಯರ್ಸ್‌ನ ಇಂಗ್ಲಿಷ್ ಬೆರಳಚ್ಚು ವಿಭಾಗದಲ್ಲಿ ದಿವ್ಯಶ್ರೀ, ಎನ್‌. ಲಕ್ಷ್ಮಿ ಹಾಗೂ ಚೈತನ್ಯ ಶೇ 87, ಕನ್ನಡ ಬೆರಳಚ್ಚು ವಿಭಾಗದಲ್ಲಿ ಎ. ಭವಾನಿ ಶೇ 87 ಅಂಕ ಪಡೆದಿದ್ದಾರೆ ಎಂದು ಸಂಸ್ಥೆಯ ಪ್ರಾಚಾರ್ಯ ಮುರುಳಿ ಮೋಹನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕೋವಿಡ್ ಬಗ್ಗೆ ಎಚ್ಚರ ವಹಿಸಿ’
ರಾಮನಗರ:
ತಾಲ್ಲೂಕಿನ ಗೊಲ್ಲರದೊಡ್ಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯಿಂದ ಜ್ಞಾನವಿಕಾಸ ಸಂಘಗಳ ಸದಸ್ಯರ ಸಭೆಯನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡಿ, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಜನಸಂದಣಿಯಿಂದಾಗಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಜನರು ಎಚ್ಚರ ವಹಿಸಬೇಕು ಎಂದು ಮನವಿ
ಮಾಡಿದರು.

ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಪೌಷ್ಟಿಕ ಆಹಾರ ನೀಡಿ, ರೋಗ ನಿರೋಧಕ ಶಕ್ತಿ ವೃದ್ಧಿಸುವಂತೆ ಮಾಡಬೇಕು. ಪೋಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಇತ್ಯಾದಿ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ತಜ್ಞರಲ್ಲಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್‌ಬಾಬು, ಸಮನ್ವಯ ಅಧಿಕಾರಿ ಚಂದ್ರಮ್ಮ ಸೇವಾ ಪ್ರತಿನಿಧಿ ಲಕ್ಷ್ಮಿದೇವಿ ಹಾಗೂ ಜ್ಞಾನ ವಿಕಾಸ ಸಂಘದ ಸದಸ್ಯರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.