ಶುಕ್ರವಾರ, ಅಕ್ಟೋಬರ್ 22, 2021
30 °C

ಟೊಯೊಟಾ: 45 ಕಾರ್ಮಿಕರ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಬಿಡದಿ‌ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ.

ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ 2020ರ ನವೆಂಬರ್‌ನಲ್ಲಿ ‌ಸಾವಿರಾರು‌ ಕಾರ್ಮಿಕರು ಮುಷ್ಕರ ಆರಂಭಿಸಿದ್ದರು. ಮೂರು ತಿಂಗಳ ಕಾಲ ಮುಷ್ಕರ ನಡೆದಿದ್ದು, ಎರಡು ಬಾರಿ ಕಾರ್ಖಾನೆ‌ ಲಾಕೌಟ್ ಆಗಿತ್ತು. ಕಡೆಗೆ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆದು‌ ಉತ್ಪಾದನೆ ಪುನರಾರಂಭಗೊಂಡಿತ್ತು.

ನಿಯಮಬಾಹಿರವಾಗಿ ಮುಷ್ಕರ ನಡೆಸಿದ ಆರೋಪದ‌ ಮೇಲೆ ಟಿಕೆಎಂ ತನ್ನ 66 ನೌಕರರನ್ನು ಸೇವೆಯಿಂದ ಅಮಾನತು ಮಾಡಿ, ಅವರ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ‌ಕಂಪನಿ‌ ‌ನಿಯಮಗಳ ಪ್ರಕಾರ 45 ಕಾರ್ಮಿಕರನ್ನು ಸೇವೆಯಿಂದ ವಜಾ‌ ಮಾಡಲಾಗಿದೆ. ಉಳಿದ ನೌಕರರನ್ನು ಸಣ್ಣ ಶಿಸ್ತು ಕ್ರಮಗಳೊಂದಿಗೆ ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಟಿಕೆಎಂ‌ ಪ್ರಕಟಣೆ ತಿಳಿಸಿದೆ.

ಕಾರ್ಮಿಕ ಸಂಘದ ಆಕ್ರೋಶ: ಕಂಪನಿಯ ಕ್ರಮಕ್ಕೆ ಟಿಕೆಎಂ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಕಂಪನಿಯು ತನ್ನ ಹಠಮಾರಿ ಧೋರಣೆ ಹಾಗೂ ಕಾರ್ಮಿಕ‌ ವಿರೋಧಿ ನೀತಿಯನ್ನು ಮತ್ತೆ ಮುಂದುವರಿಸಿದೆ. ಇದು ದುರಹಂಕಾರದ ಪರಮಾವಧಿ ಎಂದು ಟೀಕಿಸಿದೆ. ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು