20ರ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಟೊಯೊಟಾ ಕಾರ್ಮಿಕರಿಗೆ ನೋಟಿಸ್
ರಾಮನಗರ: ಬಿಡದಿಯ ಟೊಯೊಟಾ ಕಾರ್ಖಾನೆಯು ತನ್ನೆಲ್ಲ ಕಾರ್ಮಿಕರಿಗೆ ಲೀಗಲ್ ನೋಟಿಸ್ ನೀಡಿದ್ದು, ಇದೇ 20ರ ಒಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ಈಗಾಗಲೇ 1350 ಸಿಬ್ಬಂದಿ ಕೆಲಸಕ್ಕೆ ಬಂದಿದ್ದು, ಉಳಿದವರೂ ನಿಗದಿತ ದಿನದೊಳಗೆ ಕೆಲಸಕ್ಕೆ ಹಾಜರಾಗಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂಪನಿ ಎಚ್ಚರಿಸಿದೆ.
ಅಮಾನತಾಗಿರುವ 68 ಕಾರ್ಮಿಕರ ಪ್ರಕರಣ ವಿಚಾರಣೆ ಹಂತದಲ್ಲಿ ಇದ್ದು, ಅಮಾನತು ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಟಿಕೆಎಂ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.