ಗುರುವಾರ , ಆಗಸ್ಟ್ 11, 2022
21 °C

ಟೊಯೊಟಾ: ಡಿಸಿಎಂ ಮಧ್ಯಪ್ರವೇಶಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ (ಟಿಕೆಎಂ) ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಮತ್ತು ಜಿಲ್ಲಾಡಳಿತ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಒತ್ತಾಯಿಸಿದ್ದಾರೆ. 

‘ಕಾರ್ಮಿಕರು ತಪ್ಪು ಮಾಡಿದ್ದರೆ ಅವರಿಗೆ ಬುದ್ಧಿ  ಹೇಳಿ, ಕೆಲಸ ಮಾಡಲು ಅನುವು ಮಾಡಿಕೊಡಬೇಕು. ಮುಷ್ಕರ 40ನೇ ದಿನಕ್ಕೆ ಕಾಲಿಡುತ್ತಿದೆ. ಕಾರ್ಮಿಕರು ಹಾಗೂ ಅವರು ನಂಬಿರುವ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೀಘ್ರವೇ ಜಿಲ್ಲಾಡಳಿತ ಮಧ್ಯೆ ಪ್ರವೇಶಿಸಬೇಕು‘ ಎಂದು ಆಗ್ರಹಿಸಿದರು.

‘ಆಡಳಿತ ಮಂಡಳಿ ಪ್ರತಿಷ್ಠೆ ಬಿಟ್ಟು ಕೆಲಸ ಆರಂಭಿಸಲು ಅವಕಾಶ ಮಾಡಿಕೊಡಬೇಕು‘ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು