ಮಂಗಳವಾರ, ಜನವರಿ 26, 2021
16 °C

ಕಣ್ಣಿಗೆ ಬಟ್ಟೆ ಧರಿಸಿ ಟಿಕೆಎಂ ಕಾರ್ಮಿಕರು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಮೋಟರ್ಸ್‌ (ಟಿಕೆಎಂ) ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಕಾರ್ಮಿಕರು ಮಂಗಳವಾರ ಕಣ್ಣಿಗೆ ಕಪ್ಪು‌ಬಟ್ಟೆ ಕಟ್ಟಿಕೊಂಡು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ 

ನಡೆಸಿದರು. ಟೊಯೊಟೊ ಆಡಳಿತ ಮಂಡಳಿಯ ಹಠಮಾರಿ ಧೋರಣೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜಾಣ ಕುರುಡುತನ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿರುವುದಾಗಿ ಕಾರ್ಮಿಕ ಸಂಘ ಹೇಳಿದೆ. 

ಬೆಂಬಲ:  ಟೊಯೊಟಾ ಕಾರ್ಮಿಕರ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲಿಯೂ ಸಿಐಟಿಯು ಸಹಯೋಗದೊಂದಿದೆ ಹತ್ತಾರು ಕಂಪನಿ ಕಾರ್ಮಿಕರು ಒಟ್ಟಾಗಿ ಪ್ರತಿಭಟನೆ ನಡೆಸಿದ್ದಾರೆ. 

ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ದೆಹಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಚಕ್ಕೆರೆ ಪ್ರಸನ್ನ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು