ಮಂಗಳವಾರ, ಆಗಸ್ಟ್ 16, 2022
21 °C

ಟೊಯೊಟಾ: ಮತ್ತೆ 20 ಕಾರ್ಮಿಕರು ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶುಕ್ರವಾರ ಟೊಯೊಟಾ ಕಾರ್ಮಿಕರು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದರು

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಕಾರ್ಖಾನೆ ಆಡಳಿತ ಮಂಡಳಿಯು ಮತ್ತೆ 20 ಕಾರ್ಮಿಕರನ್ನು ಸೇವೆಯಿಂದ ಅಮಾನತು ಮಾಡಿದೆ. ಇದರಿಂದಾಗಿ ಅಮಾನತುಗೊಂಡವರ ಸಂಖ್ಯೆ 60ಕ್ಕೆ ಏರಿಕೆ ಆಗಿದೆ.

‘ಕೆಲಸಕ್ಕೆ ಬರಲು ಬಯಸುವ ಇತರೆ ಕಾರ್ಮಿಕರಿಗೆ ಬೆದರಿಕೆ ಒಡ್ಡುವುದು. ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು. ಕಂಪನಿ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ನ್ಯಾಯಸಮ್ಮತ ವಿಚಾರಣೆ ನಡೆಸಲಾಗುವುದು ’ ಎಂದು ಟಿಕೆಎಂ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಮಾನತು ಶಿಕ್ಷೆ ಕುರಿತು ಟಿಕೆಎಂ ಕಾರ್ಮಿಕ ಸಂಘ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಕಂಪನಿಯು ತನಗೆ ಸಂಬಂಧ ಇಲ್ಲದ ಹೊರಗಿನ ವಿಷಯದ ಆರೋಪದ ಮೇಲೆ ಕಾರ್ಮಿಕರನ್ನು ಅಮಾನತು ಮಾಡುವ ಮೂಲಕ ತನ್ನ ಅಸಹಾಯಕತೆಯನ್ನು ಹೊರಹಾಕಿದೆ. ಇದರ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಸಂಘದ ಕಾರ್ಯದರ್ಶಿ ಬಸವರಾಜ ಹವಾಲ್ದಾರ್‌ ತಿಳಿಸಿದ್ದಾರೆ. ಕಾರ್ಖಾನೆ ಮುಂಭಾಗ ನೌಕರರ ಪ್ರತಿಭಟನೆಯು 26ನೇ ದಿನವಾದ ಶುಕ್ರವಾರವೂ ಮುಂದುವರಿದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು