ಶನಿವಾರ, ನವೆಂಬರ್ 28, 2020
22 °C
ನೌಕರರ ಬೆಂಬಲಕ್ಕೆ ವಿಶ್ವ ಒಕ್ಕಲಿಗ ಮಠದ ಸ್ವಾಮೀಜಿ

10ನೇ ದಿನಕ್ಕೆ ಟೊಯೊಟಾ ಕಾರ್ಮಿಕರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಸಹೋದ್ಯೋಗಿಗಳ ಅಮಾನತು ಆದೇಶದ ವಿರುದ್ಧ ಟೊಯೊಟಾ ಕಾರ್ಮಿಕರು ನಡೆಸುತ್ತಿರುವ ಮುಷ್ಕರ ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ.ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮುಷ್ಕರದಲ್ಲಿ ಭಾಗವಹಿಸಿದ್ದರು. ಈಗಾಗಲೇ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ಸೇರಿದಂತೆ ಹತ್ತು ಹಲವು ಸಂಘಟನೆಗಳು, ಸಂಘ, ಸಂಸ್ಥೆಗಳು ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿವೆ. 

ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ, ‘ನಮ್ಮ ನೆಲದಲ್ಲಿ ಕಾರ್ಮಿಕರಿಗೆ ಅನ್ಯಾಯವಾದರೆ ಅವರ ಪರ ಧ್ವನಿ ಎತ್ತುವುದು ನಮ್ಮೆಲ್ಲರ ಕರ್ತವ್ಯ. ಸುಮಾರು 17 ಸಾವಿರ ಕುಟುಂಬಗಳು ಬೀದಿಗೆ ಬಿದ್ದರೆ ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮದಾಗಿರುತ್ತದೆ’ ಎಂದರು. 

ಟೊಯೊಟಾ ಆಡಳಿತ ಮಂಡಳಿಯೊಂದಿಗೆ ಮಂಗಳವಾರ ನಡೆದ ಮಾತುಕತೆ ವಿಫಲವಾದ್ದರಿಂದ ಮುಷ್ಕರ ಮುಂದುವರಿಯಲಿದೆ. ಬೇಡಿಕೆ ಈಡೇರಿದರೆ ಮಾತ್ರ ಕಾರ್ಮಿಕರು ಕೆಲಸಕ್ಕೆ ಹಾಜರಾಗುತ್ತಾರೆ ಎಂದು ಕಾರ್ಮಿಕರ ಸಂಘ
ಸ್ಪಷ್ಟವಾಗಿ ಹೇಳಿದೆ.   
ಲಾಕ್‌ಔಟ್ ನಿಷೇಧಿಸಿ ಸರ್ಕಾರ ಆದೇಶ: ಟೊಯೊಟಾ ಕಿರ್ಲೋಸ್ಕರ್‍ ಮೋಟಾರ್ಸ್‌ ಕಾರ್ಖಾನೆ ನೌಕರರು ನಡೆಸುತ್ತಿರುವ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾರ್ಖಾನೆಯ ಲಾಕ್‌ಔಟ್‌ ತೆರವಿಗೂ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.