ಮಾಗಡಿ: ತಾಲ್ಲೂಕಿನ ಹುಲಿಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಆಸ್ಪತ್ರೆ ತೆರೆಯಲಾಗಿದ್ದು, 50 ಮಂದಿ ಸೋಂಕಿತರಿಗೆ ಊಟ, ವಸತಿ ಸವಲತ್ತು ನೀಡಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಟಿ. ಪ್ರದೀಪ್ ತಿಳಿಸಿದರು.

ಕೋವಿಡ್ ಐಸೊಲೇಷನ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿ ಸೋಂಕಿತರೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

14 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಹೊರಗಿನಿಂದ ಪಾರ್ಸೆಲ್ ಮೂಲಕ ತಂದ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಸಣ್ಣಪುಟ್ಟ ಸಮಸ್ಯೆ ಎದುರಾದರೆ ನಮ್ಮ ಗಮನಕ್ಕೆ ತರಬೇಕು. ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಸಭೆ: ಪಟ್ಟಣದ ಅಂಗಡಿ ಮುಗ್ಗಟ್ಟುಗಳ ವರ್ತಕರ ಸಂಘದ ಸಭೆಯು ಏ. 23ರಂದು ಬೆಳಿಗ್ಗೆ 10.30ಕ್ಕೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಕೋವಿಡ್ ಸೋಂಕು ಹರಡದಂತೆ ನಿಯಂತ್ರಿಸುವಲ್ಲಿ ವರ್ತಕರ ಸಂಘದವರ ಪಾತ್ರ ಅಮೂಲ್ಯವಾಗಿದೆ. ವರ್ತಕರ ಸಂಘದ ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ಪ್ರದೀಪ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.