ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.

ಭಾನುವಾರ ನಗರದಲ್ಲಿ ನೀಟ್ ಪರೀಕ್ಷೆ ಬರೆಯಲು ಜಿಲ್ಲೆ ಜೊತೆಗೆ ಹೊರಜಿಲ್ಲೆಗಳ ವಿದ್ಯಾರ್ಥಿಗಳೂ ಧಾವಿಸಿದ್ದರು. ಪರೀಕ್ಷಾ ಕೇಂದ್ರವಾದ ಶಾಂತಿನಿಕೇತನ ವಿದ್ಯಾಸಂಸ್ಥೆ ಆವರಣದ ಬಳಿ ಹಾಗೂ ಹೆದ್ದಾರಿಯ ಎರಡು ಬದಿಯಲ್ಲಿ ತಮ್ಮ ಕಾರುಗಳನ್ನು ನಿಲುಗಡೆ ಮಾಡಿ ಪರೀಕ್ಷೆ ಬರೆಯಲು ತೆರಳಿದ್ದರು. ನಂತರ ಪರೀಕ್ಷೆ ಮುಗಿಸಿ ಏಕಾಏಕಿ ವಾಹನ ತೆಗೆಯಲು ಮುಂದಾದರು. ಇದರಿಂದಾಗಿ ಹೆದ್ದಾರಿಯಲ್ಲಿ ಎರಡು ಬದಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

ನಗರದ ಎಸ್ಪಿ ಕಚೇರಿ ಮುಂಭಾಗದಿಂದ ಹಿಡಿದು ತರಕಾರಿ ಮಾರುಕಟ್ಟೆ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕಳೆದ ಮೂರು ದಿನಗಳಿಂದ ಸರ್ಕಾರಿ ರಜೆ ಇದ್ದ ಬೆಂಗಳೂರಿನ ಜನರು ಮಂಡ್ಯ ಹಾಗೂ ಮೈಸೂರು ಮೊದಲಾದ ಕಡೆಗಳಿಗೆ ತೆರಳಿದ್ದು, ಮಧ್ಯಾಹ್ನದ ನಂತರ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿತ್ತು. ಒಂದೇ ಸಮಯದಲ್ಲಿ ವಾಹನಗಳು ರಸ್ತೆಗೆ ಇಳಿದ
ಕಾರಣ ಸಂಚಾರ ದಟ್ಟಣೆ
ಹೆಚ್ಚಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.