ಕನಕಪುರ: ಸಾರಿಗೆ ನೌಕರರ ಮುಷ್ಕರದಿಂದ ಸರ್ಕಾರಿ ಬಸ್ಗಳು ಮಂಗಳವಾರ ರಸ್ತೆಗಿಳಿಯದೆ ಡಿಪೋ ಸೇರಿದರೆ, ಖಾಸಗಿ ಬಸ್ಗಳು ಪ್ರಯಾಣಿಕರಿಗೆ ಸೇವೆ ಒದಗಿಸಿವೆ.

ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಸಾರಿಗೆ ಬಸ್ಗಳನ್ನು ರಸ್ತೆಗಿಳಿಸದೆ ಮುಷ್ಕರ ನಡೆಸಿದರು. ಹಾಗಾಗಿ ಖಾಸಗಿ ಬಸ್ಗಳು ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರಿಗೆ ಸೇವೆ ಒದಗಿಸಿದವು.

ಮುಷ್ಕರದ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿತ್ತು. ಕೆಲವು ನೌಕರರು ಸಾರಿಗೆ ಬಸ್ ಸೇವೆ ಆರಂಭಿಸಿ ಪ್ರಯಾಣಿಕರನ್ನು ಕರೆದೊಯ್ಯಲು ಮುಂದಾದಾಗ ಅದಕ್ಕೆ ಅಡ್ಡಿಪಡಿಸಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದರು.

ಸಾರಿಗೆ ಬಸ್ನಲ್ಲಿ ಸಂಚರಿಸುತ್ತಿದ್ದ ನೌಕರರು, ವಿದ್ಯಾರ್ಥಿಗಳು ಬಸ್ಗಾಗಿ ಕಾದು ಕಾದು ನಂತರ ಖಾಸಗಿ ಬಸ್ಗಳಲ್ಲಿ ಪ್ರಯಾಣ ಬೆಳಸಿದರು. ಮಧ್ಯಾಹ್ನದ ವೇಳೆಗೆ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೊ ಎನ್ನುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.