ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವು

Last Updated 25 ಏಪ್ರಿಲ್ 2022, 4:02 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಕುಂಭಾಪುರ ಗೇಟ್ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು.

ಸುಂದರೇಶ (49) ಹಾಗೂ ತನ್ಮಯ್ (9) ಮೃತರು. ಶೀಲಾ, ಗಾನವಿ, ಸಾನ್ವಿ ಎಂಬುವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುಟುಂಬವು ಸೋಮವಾರ ಬೆಳಿಗ್ಗೆ ಮಾರುತಿ ಓಮ್ನಿ ಕಾರಿನಲ್ಲಿ ಮದ್ದೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆಯಿತು.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ‌ ಸಮಯ ವಾಹನಗಳ ಸಂಚಾರ ಅಸ್ತವ್ಯಸ್ತ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT