ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಾಯಿ ಹೆಸರಿನಲ್ಲಿ ವೃಕ್ಷ ಅಭಿಯಾನ

ಅಭಿಯಾನ
Published : 26 ಆಗಸ್ಟ್ 2024, 6:37 IST
Last Updated : 26 ಆಗಸ್ಟ್ 2024, 6:37 IST
ಫಾಲೋ ಮಾಡಿ
Comments

ಕುದೂರು: ‘ತಾಯಿ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಅಮ್ಮನ ಹೆಸರಿನಲ್ಲಿ ಸಸಿ ನೆಟ್ಟು ಬೆಳೆಸಿ ಪ್ರಕೃತಿಗೆ ಕೊಡುಗೆ ನೀಡಬೇಕು’ ಎಂದು ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಈಚೆಗೆ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಆಯೋಜಿಸಿದ್ದ ‘ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ತಾಯಿ ನೆನಪಿನಲ್ಲಿ ಒಂದು ಗಿಡ ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು.

‘ನಗರೀಕರಣ ಹೆಸರಿನಲ್ಲಿ ಕಾಂಕ್ರೀಟ್‌ ಕಾಡು ಹೆಚ್ಚಾಗುತ್ತಿದೆ. ಪ್ರಸ್ತುತ ಪರಿಸರ ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯ ಇದೆ. ಪ್ರತಿಯೊಬ್ಬ ನಾಗರಿಕರು ಗಿಡ ಬೆಳೆಸಿ ಉಳಿಸಬೇಕು ಎಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಎಚ್.ಗುರುಮೂರ್ತಿ ತಿಳಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಕಾರ್ಯದರ್ಶಿ ವೆಂಕಟೇಶ್, ಕಾಲೇಜಿನ ಪ್ರಾಧ್ಯಾಪಕರು, ಪಂಚಾಯಿತಿ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT