ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿಯಲ್ಲಿ ಕೊರೊನಾ ಸೋಂಕು ಎರಡನೇ ಪ್ರಕರಣ ಪತ್ತೆ

Published 20 ಡಿಸೆಂಬರ್ 2023, 15:38 IST
Last Updated 20 ಡಿಸೆಂಬರ್ 2023, 15:38 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಬಿಡದಿ ಹೋಬಳಿಯ ತಿಮ್ಮೆಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ 26 ವರ್ಷದ ಮಹಿಳೆಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಎರಡೇ ದಿನಗಳಲ್ಲಿ ಒಂದೇ ಗ್ರಾಮದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎರಡಕ್ಕೆ ಏರಿದಂತಾಗಿದೆ.

ಗ್ರಾಮದ ಮಹಿಳೆಯು ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಆಸ್ಪತ್ರೆ ಸಿಬ್ಬಂದಿಗಳು ಅವರನ್ನು ಪರೀಕ್ಷಿಸಿದಾಗ ಕೊರೊನಾ ಲಕ್ಷಣಗಳು ಕಂಡು ಬಂದಿದೆ. ಆನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ತಿಮ್ಮೆಗೌಡನದೊಡ್ಡಿ ಗ್ರಾಮದಲ್ಲಿ ಕಳೆದ ಎರಡು ದಿನದಲ್ಲಿ ಎರಡು ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿರುವ ಕಾರಣ ಗ್ರಾಮಸ್ಥರಲ್ಲಿ ಹಾಗೂ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಮಂಗಳವಾರ ಇದೇ ಗ್ರಾಮದಲ್ಲಿರುವ ಅಮೃತ್ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಪ್ರಕರಣ ಜಿಲ್ಲೆಗೆ ಪ್ರಥಮ ಸೋಂಕಿತ ಪ್ರಕರಣವಾಗಿತ್ತು. ಇದೀಗ ಬುಧವಾರವು ಇದೇ ಗ್ರಾಮದ ಮಹಿಳೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.

ಗ್ರಾಮದಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಹಿಳೆಯ ಮನೆ ಹಾಗೂ ಅಕ್ಕ ಪಕ್ಕದ ಮನೆಯವರು ಈ ಪ್ರಕರಣದಿಂದ ಸ್ವಲ್ಪ ಗಲಿಬಿಲಿಯಾಗಿದ್ದಾರೆ. ಗ್ರಾಮಕ್ಕೆ ಅರೋಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ.

ಆಸ್ಪತ್ರೆಯಿಂದ ವಿದ್ಯಾರ್ಥಿ ಡಿಸ್ಚಾರ್ಜ್: ಕೊರೊನಾ ಸೋಂಕು ಕಾಣಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಅಮೃತ್ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬುಧವಾರ ಆಸ್ಪತ್ರೆಯಿಂದ ಮನೆಗೆ ಕಳಿಸಲಾಯಿತು.

ತೀವ್ರ ತರದ ರೋಗ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ ನೀಡಿ ಬುಧವಾರ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ. ಎಲ್ಲೂ ಹೋರ ಹೋಗಂದತೆ ತಾಕೀತು ಮಾಡಿದ್ದು, ಇನ್ನಷ್ಟು ದಿನ ಮನೆಯಲ್ಲೆ ಇದ್ದು ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಅಮೃತ್ ಕಾಲೇಜಿನ ಎಂಜಿನಿಯರಿಂಗ್ 22 ವರ್ಷದ ವಿದ್ಯಾರ್ಥಿಗೆ ಮಂಗಳವಾರ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ರಾಮನಗರದ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT