ರಾಮನಗರ: ಜಿಲ್ಲೆಯಲ್ಲಿ ಶನಿವಾರ ಇಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರನಡೆದಿದ್ದಾರೆ.

ಶನಿವಾರ ಒಟ್ಟು 716 ವರದಿಗಳು ನಕರಾತ್ಮಕ ಫಲಿತಾಂಶ ಬಂದಿದ್ದು, ಇಬ್ಬರಿಗೆ ಮಾತ್ರ ಕೊರೊನಾ ಸೋಂಕು ತಗುಲಿದೆ. ಕನಕಪುರ ತಾಲ್ಲೂಕಿನ ವ್ಯಕ್ತಿಯೊಬ್ಬರು ಬಿಡದಿಯ ಕಾರ್ಖಾನೆ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಸೋಂಕು ತಗುಲಿದೆ. ಮತ್ತೊಬ್ಬರು ರಾಮನಗರ ನಿವಾಸಿಯಾಗಿದ್ದು, ಬೆಂಗಳೂರಿನ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರನ್ನೂ ರಾಮನಗರ ಕೋವಿಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚುತ್ತಲಿರುವುದು ಆಶಾದಾಯಕ ಬೆಳವಣಿಗೆ. ಒಟ್ಟು 227 ಸೋಂಕಿತರ ಪೈಕಿ ಈವರೆಗೆ 115 ಮಂದಿ ಚೇತರಿಕೆ ಕಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕನಕಪುರದಲ್ಲಿ 62, ಮಾಗಡಿ 83, ಚನ್ನಪಟ್ಟಣ 40 ಮತ್ತು ರಾಮನಗರದಲ್ಲಿ 42 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ.

ಶಾಸಕರಿಗೆ ನೆಗೆಟಿವ್: ಸದ್ಯ ಕ್ವಾರಂಟೈನ್ನಲ್ಲಿ ಇರುವ ಮಾಗಡಿ ಶಾಸಕ ಎ.ಮಂಜುನಾಥ್ ಅವರ ವರದಿ ನೆಗೆಟಿವ್ ಆಗಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಮತ್ತೊಂದೆಡೆ, ವಿಧಾನ ಪರಿಷತ್ನ ಮಾಜಿ ಸದಸ್ಯ ಪುಟ್ಟಣ್ಣ ಅವರಿಗೆ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.