ಶನಿವಾರ, ಸೆಪ್ಟೆಂಬರ್ 25, 2021
29 °C

ಚನ್ನಪಟ್ಟಣ: ಮಗು ಪಾಲನೆ ಅಕ್ರಮ ಇಬ್ಬರು ಮಹಿಳೆಯರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ತಾಲ್ಲೂಕಿನ ಅಪ್ಪಗೆರೆ ಗ್ರಾಮದಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ಮಗು ಪಾಲನೆ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಡಿಪಿಒ ಸಿದ್ದಲಿಂಗಯ್ಯ ತಿಳಿಸಿದ್ದಾರೆ.

‘ಅಪ್ಪಗೆರೆಯಲ್ಲಿ ವಾಸವಿದ್ದ ಮಹಿಳೆ ಮಗುವನ್ನು ದತ್ತು ಪಡೆದಿರುವುದು ನಿಜ. ಆದರೆ ಆಕೆ ಕಾನೂನಾತ್ಮಕವಾಗಿ ದತ್ತು ಪಡೆಯದೆ ಕೇವಲ ಹಣವನ್ನು ನೀಡಿ ದತ್ತು ಪಡೆದಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧವಾಗಿರುವ ಕಾರಣ ಮಗುವನ್ನು ಅಕ್ರಮವಾಗಿ ದತ್ತು ಪಡೆದ ಮಹಿಳೆಯನ್ನು ಹಾಗೂ ಮಗುವನ್ನು ದತ್ತು ಕೊಟ್ಟ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಅವರಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಇದು ಮಕ್ಕಳ ಮಾರಾಟ ಜಾಲವಿರಬಹುದು ಎಂದು ಸಾರ್ವಜನಿಕ ವಲಯದಲ್ಲಿ ಅನುಮಾನ ಮೂಡಿದೆ. ಇದರ ಬಗ್ಗೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಹೊರಬೀಳಲಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಅಪ್ಪಗೆರೆ ಗ್ರಾಮದಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ಮಗುವೊಂದನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ನೀಡಿದ ಮಾಹಿತಿ ಅನ್ವಯ ಸಿಡಿಪಿಒ ಸಿದ್ದಲಿಂಗಯ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದರು. ಈ ಸಂಬಂಧ ಭಾನುವಾರ ಅಪ್ಪಗೆರೆ ಗ್ರಾಮಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಿಳೆಯ ವಿಚಾರಣೆ ನಡೆಸಿದ್ದರು. ನಂತರ ಈ ಸಂಬಂಧ ಇಬ್ಬರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.