ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಯುವಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ತಾಲ್ಲೂಕಿನ ಬಾಚಹಳ್ಳಿದೊಡ್ಡಿ ಹಾಗೂ ಗೊಲ್ಲರದೊಡ್ಡಿ ಗ್ರಾಮದ ಮಧ್ಯೆ ಶನಿವಾರ ಸಂಜೆ ಟ್ರ್ಯಾಕ್ಟರ್‌ವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕರಲಹಳ್ಳಿ ಗ್ರಾಮದ ಕೆ.ವಿ. ಲೋಕೇಶ್ (28) ಹಾಗೂ ವಿಕಾಸ್ (25) ಮೃತಪಟ್ಟವರು.

ಮನೆಯೊಂದರ ಅಡಿಪಾಯಕ್ಕೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ಸಾಗಿಸುತ್ತಿದ್ದ ವೇಳೆ ಇಳಿಜಾರಿನಲ್ಲಿ ಆಯತಪ್ಪಿ ಪಲ್ಟಿ ಹೊಡೆದಿದೆ. ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಲೋಕೇಶ್ ಹಾಗೂ ಪಕ್ಕದಲ್ಲಿ ಕುಳಿತಿದ್ದ ವಿಕಾಸ್ ಮೇಲೆ ಟ್ರ್ಯಾಲಿ ಬಿದ್ದಿದ್ದು, ಇಬ್ಬರು ಮಣ್ಣಿನ ಕೆಳಗೆ ಸಿಕ್ಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಅಕ್ಕೂರು ಪೊಲೀಸರು ಆಗಮಿಸಿ ಮೃತದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು