ಬುಧವಾರ, ಫೆಬ್ರವರಿ 19, 2020
30 °C

ಯುನಾನಿ ದಿನಾಚರಣೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಆಯುಷ್ ಇಲಾಖೆ ವತಿಯಿಂದ ಇದೇ 11ರಂದು ಯುನಾನಿ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಯುನಾನಿ ಆರೋಗ್ಯ ಶಿಬಿರ, ಮನೆಮದ್ದು ಮತ್ತು ಪ್ರದರ್ಶನದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. 

ಪ್ರಬಂಧಗಳ ಆಹ್ವಾನ

ರಾಮನಗರ: ಕರ್ನಾಟಕ ಸಾಹಿತ್ಯ ಆಕಾಡೆಮಿಯು ಮಾರ್ಚ್ 19 ಮತ್ತು 20 ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವ ನೆನಪಿಗಾಗಿ ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ ಎಂಬ ವಿಷಯದಡಿ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.

ಈ ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಇದೇ 25ರ ಒಳಗೆ ಅಕಾಡೆಮಿಯ ಇ-ಮೇಲ್ www.karnatakasahithyaacademy.org ವಿಳಾಸಕ್ಕೆ ಕಳುಹಿಸಬೇಕು. ಮಾಹಿತಿಗಾಗಿ ದೂ.ಸಂ. 080-22211730, 22106460 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)