ಬಿಡದಿ (ರಾಮನಗರ): ಪಟ್ಟಣದ ಕೇತಗಾನಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಇತರರು ಒತ್ತುವರಿ ಮಾಡಿರುವ 15 ಎಕರೆಯಷ್ಟು ಸರ್ಕಾರಿ ಭೂಮಿ ತೆರವು ಕಾರ್ಯಾಚರಣೆಗೆ ಕ್ಷಣಗಣನೆ ಆರಂಭವಾಗಿದೆ.

ಕಾರ್ಯಾಚರಣೆಗಾಗಿ ಸ್ಥಳದಲ್ಲಿ 5 ಜೆಸಿಬಿ ವಾಹನಗಳು, ಎರಡ್ಮೂರು ಟ್ರಾಕ್ಟರ್ಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕೋರ್ಟ್ ಆದೇಶ ಹಾಗೂ ಒತ್ತುವರಿ ಸರ್ವೆ ವರದಿಯೊಂದಿಗೆ ಕುಮಾರಸ್ವಾಮಿ ಅವರ ತೋಟದ ಮನೆ ಜಾಗಕ್ಕೆ ಬೆಳಿಗ್ಗೆ 11.45ರ ಸುಮಾರಿಗೆ ಬಂದರು. ಉಪ ವಿಭಾಗಾಧಿಕಾರಿ ಬಿನೋಯ್ ಪಿ.ಕೆ, ತಹಶೀಲ್ದಾರ್ ತೇಜಸ್ವಿನಿ, ಸರ್ವೆ ಅಧಿಕಾರಿ ಹನುಮೇಗೌಡ, ಪೊಲೀಸರು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.

ಕೋರ್ಟ್ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ನಡೆಸಲು ಮುಂದಾಗಿದ್ದೇವೆ. ಹಲವರಿಗೆ ಸೇರಿರುವ 12 ಸರ್ವೆ ನಂಬರ್ಗಳ 15 ಎಕರೆಯಷ್ಟು ಜಾಗ ಒತ್ತುವರಿ ತೆರವು ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ತೋಟದ ಮನೆಗೆ ಹೋದ ಬಳಿಕ, ಒಳಕ್ಕೆ ಒಂದು ಜೆಸಿಬಿ ಮತ್ತು ಕಲ್ಲುಗಳನ್ನು ಹೊತ್ತ ಟ್ರಾಕ್ಟರ್ ತೋಟದ ಮನೆ ಪ್ರವೇಶಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.