ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

3 ತಿಂಗಳಿಗೊಮ್ಮೆ ಕೋಶ ಸಮಿತಿ ಸಭೆಗೆ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮನವಿ

Published : 9 ಆಗಸ್ಟ್ 2024, 15:42 IST
Last Updated : 9 ಆಗಸ್ಟ್ 2024, 15:42 IST
ಫಾಲೋ ಮಾಡಿ
Comments


ರಾಮನಗರ: ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೋಶ ಸಮಿತಿ ಸಭೆಯನ್ನು ಆಯೋಜಿಸಬೇಕು ಎಂದು ಒತ್ತಾಯಿಸಿ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಬಿಂಬ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ರಾಜ್, ಮೂಲಭೂತ ಸೌಲಭ್ಯಗಳು ಸೇರಿದಂತೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ನಮ್ಮ ಕಾರ್ಯಕರ್ತರ ಪೈಕಿ ಬಹುತೇಕರಿಗೆ ಸ್ವಂತ ಮನೆಗಳಿಲ್ಲ, ಬಾಡಿಗೆಗೆ ಮನೆ ಸಿಗುತ್ತಿಲ್ಲ. ಹೀಗಾಗಿ ಆದ್ಯತೆಯ ಮೇರೆಗೆ ಸ್ವಂತ ಮನೆಗಳನ್ನು ನಿರ್ಮಿಸಿಕೊಡಬೇಕು.  ಲೈಂಗಿಕ ಅಲ್ಪಸಂಖ್ಯಾತರಿಗೆ ಪಿಂಚಣಿ ವ್ಯವಸ್ಥೆಯೂ ಇಲ್ಲ. ಆರೋಗ್ಯ ಇಲಾಖೆ ಕೂಡ ಕಡೆಗಣಿಸುತ್ತಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸೇವಾ ಸೌಲಭ್ಯಗಳು ಸಿಗುತ್ತಿಲ್ಲ, ಪೌಷ್ಠಿಕ ಆಹಾರದ ಕೊರತೆ ಇದೆ. ಹೀಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಗಳನ್ನು ಆಯೋಜಿಸಿ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ವಿನಂತಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪ್ರಮುಖ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಈ ಸಮುದಾಯದ ಸದಸ್ಯರು ಮತ್ತು ಲೈಂಗಿಕ ವೃತ್ತಿ ನಿರತ ಮಹಿಳೆಯರ ಬದುಕು, ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ. 2017ರ ಕರ್ನಾಟಕ ಟಿ.ಜಿ. ನಿಯಮದ ಶಿಪಾರಸ್ಸಿನಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕೋಶ ಸಮಿತಿ ವತಿಯಿಂದ ಸಭೆ ಆಯೋಜಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT