ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರರಂಗದಿಂದ ದರ್ಶನ್ ಅಮಾನತುಗೊಳಿಸಲು ಆಗ್ರಹ

ಆಗ್ರಹ
Published 13 ಜೂನ್ 2024, 16:29 IST
Last Updated 13 ಜೂನ್ 2024, 16:29 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಚಿತ್ರನಟ ದರ್ಶನ್ ಹಾಗೂ ಅವರ ತಂಡವನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ದರ್ಶನ್ ಅವರನ್ನು ಕನ್ನಡ ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಅಭಿಮಾನಿಗಳೇ ದೇವರು ಎಂದು ಬಾಳಿದ ಡಾ.ರಾಜ್ ಕುಮಾರ್ ಮೇರುನಟರು. ಅಭಿಮಾನಿಯನ್ನು ವಿಕೃತವಾಗಿ ಹಿಂಸೆ ಮಾಡಿ ಕೊಲೆ ಮಾಡಿರುವ ಆರೋಪ ಹೊತ್ತಿರುವ ನಟ ದರ್ಶನ್ ಕಪ್ಪುಚುಕ್ಕೆ. ಅವರನ್ನು ಕನ್ನಡ ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ವೇದಿಕೆ ಪದಾಧಿಕಾರಿಗಳಾದ ಬೇವೂರು ಯೋಗೀಶ್ ಗೌಡ, ಮಳೂರುಪಟ್ಟಣ ರವಿ, ಬೈರಾಪಟ್ಟಣ ತಿಮ್ಮೇಗೌಡ, ರಾಜು, ಕುಮಾರ್, ಜಯರಾಮು, ಹುಚ್ಚಪ್ಪ, ಚಿಕ್ಕಣ್ಣಪ್ಪ, ಸಿದ್ದಯ್ಯ, ಪುನೀತ್, ಅಜಯ್, ಶ್ಯಾನುಭೋಗನಹಳ್ಳಿ ರವಿ, ಚನ್ನಪ್ಪ, ಚಿಕ್ಕೇನಹಳ್ಳಿ ಸಿದ್ದಪ್ಪ, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT